ಪೌರ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

Published on

ಚಾಮರಾಜನಗರ: ರಾಜ್ಯದಲ್ಲಿರುವ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಲಾಯಿತು.

ನಗರದ ಹೃದಯ ಭಾಗದಲ್ಲಿರುವ ನಗರಸಭೆ ಕಚೇರಿ ಮುಂಭಾಗ ಜಮಾಯಿಸಿದ ನೌಕರರು ಹಾಗೂ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು. ವಿವಿಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸಮುದಾಯ ಸಂಘಟನಾಧಿಕಾರಿ ವೆಂಕಟನಾಯಕ ಮಾತನಾಡಿ, ರಾಜ್ಯ ಪೌರನೌಕರರ ಸಂಘವು ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಸಹ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ವರೆಗೂ ಸರ್ಕಾರದಿಂದ ಸ್ಪಂದನೆ ದೊರೆಯಲಿಲ್ಲ. ಈ ಕಾರಣದಿಂದ ಮೇ 27 ರಿಂದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಕಸಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ ಹಾಗೂ ಒಳಚರಂಡಿ ನಿರ್ವಹಣೆ ಕೆಲಸಗಳನ್ನು ಸ್ಥಗಿತಗೊಳಿಸಿ ನಮ್ಮ ಬೇಡಿಕೆಗಳು ಈಡೇರುವ ವರೆಗೂ ಮುಷ್ಕರ ನಡೆಸಲಿದ್ದೇವೆ ಎಂದು ಹೇಳಿದರು.

ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರಕಾರ್ಮಿಕರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗರದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಯೋಜನೆಯಾದ ಜ್ಯೋತಿ ಸಂಜೀವಿನಿಯನ್ನು ಪೌರನೌಕರರಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರ, ವಾಹನ ಚಾಲಕರು, ಲೋಡರ್‌ಗಳು, ಕ್ಲೀನರ್‌ಗಳು, ಸ್ವಚ್ಛತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರನ್ನು ನೇರ ಪಾವತಿಗೆ ಒಳಪಡಿಸಬೇಕು. ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ್‌ಉ ವೇತನ ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ವಾಹನ ಚಾಲಕರು, ನೀರು ಪೂರೈಕೆ ನೌಕರರು, ನೇರಪಾವತಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು. ನೌಕರರಿಗೆ ಎಸ್‌ಎಫ್ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಡಾ.ಪರಮೇಶ್ವರಪ್ಪ, ನಗರಸಭೆ ಕಿರಿಯ ಅಭಿಯಂತರಾದ ಶಿವಶಂಕರ್ ಆರಾಧ್ಯ, ಪರಿಸರ ಅಭಿಯಂತರರಾದ ರೂಪ, ಹಿರಿಯ ಆರೋಗ್ಯ ನಿರೀಕ್ಷರಾದ ಮಂಜುನಾಥ್, ಸುಷ್ಮಾ, ಕಿರಿಯ ಆರೋಗ್ಯ ನಿರೀಕ್ಷಕರಾದ ಪುಷ್ಪ, ಪೌರಕಾರ್ಮಿಕರಾದ ಆರ್.ನಾಗರಾಜು, ಸಿ.ಪಿ.ಕುಮಾರ್, ಎಸ್.ರಾಜೇಂದ್ರ, ಸ್ವಾಮಿನಾಥ್, ತುಳಸಮ್ಮ, ರಾಜಮ್ಮ, ಆರ್.ಪಾಪತಿ, ವಿಜಯಮ್ಮ, ಭಾಗ್ಯ, ವರಲಕ್ಷ್ಮೀ, ನೀರು ಸರಬರಾಜುದಾರ ರಾಜಪ್ಪ, ನಾಗರಾಜು, ಮಹದೇವಸ್ವಾಮಿ, ಎ್ಡಿಎ ಸಂತೋಷ್ ಕುಮಾರ್, ಮಹದೇವಸ್ವಾಮಿ, ಪಳನಿಸ್ವಾಮಿ, ಸಿದ್ದಪ್ಪಾಜಿ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net