ಪೌರಾಯುಕ್ತ ರಾಮದಾಸ್ ವರ್ಗಾವಣೆಗೆ ಆಗ್ರಹ

Published on

ಚಾಮರಾಜನಗರ: ನಗರಸಭೆ ಪೌರಾಯುಕ್ತ ರಾಮದಾಸ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪೌರಾಯುಕ್ತರ ವರ್ಗಾವಣೆಗೆ ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಕೂಡ ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ರಾಮದಾಸ್ ಅವರ ವರ್ಗಾವಣೆ ವಿಚಾರದಲ್ಲಿ ಮೌನವಾಗಿದ್ದಾರೆ. ಈ ಹಿಂದೆ ಕೆಡಿಪಿ ಸಭೆಯಲ್ಲಿ ಸಚಿವ ಭೈರತಿ ಸುರೇಶ್ ಅವರು ಪೌರಾಯುಕ್ತ ರಾಮದಾಸ್ ಅವರನ್ನು ವರ್ಗಾವಣೆ ಮಾಡುವಂತೆ ಸೂಚನೆ ನೀಡಿದ್ದರು. ಈ ವಿಚಾರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಹ ರಾಮದಾಸ್ ಅವರನ್ನು ವರ್ಗಾವಣೆ ಮಾಡುವಂತೆ ನಿರ್ಧರಿಸಿದ್ದರು. ಆದರೇ ಈ ವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಗರಸಭೆ ಪೌರಾಯುಕ್ತರಾಗಿ ರಾಮದಾಸ್ ಅವರು ನಗರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ. ಸಾಕ್ಷಿ ಸಮೇತವಾಗಿ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನಾಲ್ಕು ಬಾರಿ ದೂರು ನೀಡಿದ್ದೇವೆ. ಮುಂದಿನ ದಿನದಲ್ಲಿ ಈ ಸಂಬಂಧ ಕ್ರಮ ವಹಿಸಲಿದ್ದರೆ. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಪ್ರತಿಭಟನೆಯನ್ನು ಮಾಡಿ ಶಾಸಕರಿಗೆ ಮನವಿ ಸಲ್ಲಿಸುತ್ತೇವೆ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಂಜು ಎಂ.ನಾಯಕ್, ತಾಲೂಕು ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ದರ್ಶನ, ಪ್ರಧಾನ ಕಾರ್ಯದರ್ಶಿ ದೀಪಕ್, ಪವನ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net