ಬಳ್ಳಾರಿ : ಕ್ಷಯರೋಗಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಅರೋಗ್ಯ ಇಲಾಖೆ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಜೆಎಸ್‌ಡಬ್ಲುೃ ಫೌಂಡೇಷನ್‌ನಿಂದ ಕ್ಷಯರೋಗಿಗಳಿಗೆ ಪ್ರತಿ ತಿಂಗಳು ಉಚಿತವಾಗಿ ಪೌಷ್ಟಿಕ ಆಹಾರದ ಕಿಟ್‌ಗಳ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ ಮತ್ತು ಪ್ರಧಾನ ಮಂತ್ರಿ ಕ್ಷಯರೋಗಮುಕ್ತ ಭಾರತ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಅರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜೆಎಸ್‌ಡಬ್ಲುೃ ಫೌಂಡೇಷನ್ ಸಹಯೋಗದಲ್ಲಿ ಸೋಮವಾರ ಡಿಸಿ ಕಚೇರಿಯಲ್ಲಿ ನಡೆದ 1287 ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್‌ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಂದಾಲ್‌ನ ಹಿರಿಯ ಉಪಾಧ್ಯಕ್ಷ ಸಂಜಯ್ ಹಂಡೂರ್ ಮಾತನಾಡಿ, ಫೌಂಡೇಷನ್ ಇದುವರೆಗೂ 7347 ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಣೆ ಮಾಡಿದೆ. ಇನ್ನು ಆರು ತಿಂಗಳಿಗೆ ಮುಂದುವರಿಸಲಾಗುವುದು ಎಂದರು. ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ವೈ.ರಮೇಶ್ ಬಾಬು, ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಇಂದ್ರಾಣಿ, ಫೌಂಡೇಷನ್ ಸಿಎಸ್‌ಆರ್ ಮುಖ್ಯಸ್ಥ ಪೆದ್ದಣ್ಣ ಬೀಡಲಾ, ಆರೋಗ್ಯ ವಿಭಾಗದ ಸಂಯೋಜಕ ಮುತ್ತು ಕೃಷ್ಣ ಇತರರಿದ್ದರು.