ಪೌಷ್ಟಿಕ ಆಹಾರ ಸೇವನೆ ಮಾಡಿ

11ydg05
Published on

ಯಾದಗಿರಿ: ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆ, ಗಭರ್ಿಣಿ ಹಾಗೂ ಬಾಣಂತಿಯರು ಅನುಭವಿಸುತ್ತಿರುವ ರಕ್ತಹೀನತೆ ಸಮಸ್ಯೆ ನಿವಾರಣೆಗೆ ಸರಕಾರ ಹಲವು ಯೋಜನೆಗಳ ಮೂಲಕ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ ಎಂದು ಚಟ್ನಳ್ಳಿ ವಲಯ ಅಂಗನವಾಡಿ ಮೇಲ್ವಿಚಾರಕಿ ಕವಿತಾ ಕುಲಕಣರ್ಿ ತಿಳಿಸಿದರು.

ಸೋಮವಾರ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ತಿಳಿವಳಿಕೆ ಕೊರತೆಯಿಂದ ಗಭರ್ಿಣಿಯರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರದಲ್ಲಿ ನಿತ್ಯ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಇದರ ಜತೆಗೆ ಮಕ್ಕಳ ಆರೋಗ್ಯದೆಡೆಗೂ ಸಹ ಕಾಳಜಿ ವಹಿಸುತ್ತಿದೆ ಎಂದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಕಾರಿ ಯೋಗಿತಾ ಮಾತನಾಡಿ, ಬಾಣಂತಿಯರು ನಿತ್ಯ ಪೌಷ್ಟಿಕ ಆಹಾರ ಸೇವನೆ ಮಾಡುವುದರಿಂದ ಜನಿಸುವ ಮಗು ಆರೋಗ್ಯವಾಗಿರುತ್ತದೆ. ಕಾಲಕಾಲಕ್ಕೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಅಲ್ಲದೆ ಮಾತ್ರೆ, ಔಷ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಅಂಗನವಾಡಿ ಮರಿಲಿಂಗಮ್ಮ, ಶಿಕ್ಷಕಿ ಕಮಲಾಕ್ಷಿ, ಜ್ಯೋತಿ ಸೇರಿ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net