ಪೌಷ್ಟಿಕ ಆಹಾರ ಸೇವಿಸಿ

image_50459393
Published on

ನಾಗಮಂಗಲ: ಯಾವ ರಾಷ್ಟ್ರ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಯಾಗಿರುತ್ತದೋ ಆ ದೇಶದ ಪ್ರಜೆಗಳು ಆರೋಗ್ಯವಂತರಾಗಿರುತ್ತಾರೆ ಎಂದು ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ್ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಕ್ತಹೀನತೆಯಿಂದ ಅಶಕ್ತ ಮತ್ತು ಅನಾರೋಗ್ಯವಂತ ಶಿಶು ಜನನವಾಗುತ್ತವೆ. ಆದ್ದರಿಂದ ಗರ್ಭಿಣಿಯರು ಗರ್ಭಾವಸ್ಥೆಯಲ್ಲಿ ಹೆಚ್ಚು ಸಮತೋಲನ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪೊಟ್ಟಣ ಮಾದರಿಯ ಆಹಾರ ಸೇವನೆ ಹಾಗೂ ಪಾಶ್ಚಾತ್ಯ ದೇಶಗಳ ಆಹಾರ ಸೇವಿಸುವುದು ಒಂದು ಫ್ಯಾಷನ್ ಆಗಿದೆ. ಪಾಶ್ಚಾತ್ಯ ದೇಶಗಳ ಆಹಾರ ಸೇವನೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಹೆಣ್ಣು ಮಕ್ಕಳು ಋತುಮತಿಯಾಗುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ರಮೇಶ್‌ಗೌಡ, ಸರ್ಕಾರಿ ಅಭಿಯೋಜಕಿ ಅರುಣಾಬಾಯಿ, ಅಪರ ಸರ್ಕಾರಿ ವಕೀಲ ಪಿ.ಸಿ.ಮಂಜುನಾಥ್, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಲಕ್ಷ್ಮೀಸಾಗರ್, ಎಸಿಡಿಪಿಒ ಹರಿಪ್ರಸಾದ್, ಪುರಸಭೆ ಪರಿಸರ ಅಭಿಯಂತರಾದ ವೀಕ್ಷಿತಾ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net