ಪೌಷ್ಠಿಕ ಆಹಾರದಿಂದ ಆರೋಗ್ಯ

11CBP4dcmeeting (1)
Published on

ಚಿಕ್ಕಬಳ್ಳಾಪುರ : ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಸೇವಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಆಯೋಜಿಸಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಭಿತ್ತಿ ಚಿತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಸದೃಢ, ಆರೋಗ್ಯವಂತ ನಾಗರಿಕರಿಂದ ಮಾತ್ರ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ. ಇದಕ್ಕೆ ಗರ್ಭಿಣಿಯರು ಮತ್ತು ತಾಯಂದಿರು ಮಗುವಿನ ಹಿತದೃಷ್ಟಿಯಿಂದ ಪೌಷ್ಠಿಕತೆಯಿಂದ ಕೂಡಿರುವ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ತಿನ್ನಬೇಕು. ಇದರಿಂದ ಅಪೌಷ್ಠಿಕತೆ, ರಕ್ತಹೀನತೆ ದೂರವಾಗುತ್ತದೆ ಎಂದರು.

ಪೋಷಣ್ ಅಭಿಯಾನವು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕು. ಇದರ ಮಹತ್ವದ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಚೆನ್ನಕೇಶವರೆಡ್ಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net