ಪ್ರಕಟಿತ ಪುಸ್ತಕಗಳನ್ನು ಬೆಳಕಿಗೆ ತರುವ ಕೆಲಸವಾಗಲಿ

01 MANJU 02
Published on

ಹೊಸಪೇಟೆ: ಕನ್ನಡದ ಜ್ಞಾನವನ್ನು ಅನಾವರಣಗೊಳಿಸಿ ಇನ್ನಷ್ಟು ವೃದ್ಧಿಸಲು ಹಂಪಿ ವಿವಿಯಯಿಂದ ಪ್ರಕಟವಾದ ಪುಸ್ತಕಗಳನ್ನು ಡಿಜಟಲೀಕರಣಗೊಳಿಸಬೇಕಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಅಭಿಪ್ರಾಯಪಟ್ಟರು.

ಕನ್ನಡ ವಿವಿಯ ವಿದ್ಯಾರಣ್ಯ ಮಂಟಪ ಸಭಾಂಗಣದಲ್ಲಿ 33ನೇ ನುಡಿಹಬ್ಬ ನಿಮಿತ್ತ ಪ್ರಸಾರಾಂಗದಿAದ 60 ಪುಸ್ತಕಗಳನ್ನು ಲೋಕಾರ್ಪಣೆಗಳಿಸಿ ಮಂಗಳವಾರ ಮಾತನಾಡಿದರು.

ನುಡಿಹಬ್ಬದ ಪ್ರಯುಕ್ತ ಕಲೆ, ಸಾಹಿತ್ಯ, ಇತಿಹಾಸ, ವಿಜ್ಞಾನ ಮತ್ತು ಆರೋಗ್ಯ ಸೇರಿದಂತೆ ವಿವಿಧ ಬಗೆಯ 60 ಪುಸ್ತಕಗಳನ್ನು ಪ್ರಕಟಿಸಿರುವುದು ಉತ್ತಮವಾದ ಕಾರ್ಯ. ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು.

ಹಂಪಿಯ ಕನ್ನಡ ವಿವಿಯ ಐಕಾನಿಕ್ ವಿವಿಯಾಗಿದೆ. ಇಂತಹ ವಿಶಿಷ್ಟವಾದ ವಿವಿ ಈ ಭಾಗದಲ್ಲಿರುವುದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಹೆಮ್ಮೆಯ ವಿಷಯ. ಅಬಿವೃದ್ಧಿಗೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ನೀಡಲು ಕ್ರಮವಹಿಸಲಾಗುವುದು. ವಿಜಯನಗರ ಜಿಲ್ಲೆಗೆ ಆದಾಯದ ಮೂಲ ಪ್ರವಾಸೋದ್ಯಮವಾಗಿದೆ ಆದ್ದರಿಂದ ವಿವಿಯಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಆರಂಭಿಸುವುದರ ಮೂಲಕ ದೇಶಿಯ ಆಹಾರ, ಕಲೆ, ಸಂಸ್ಕೃತಿಯನ್ನು ಪರಿಚಯಿಸುವ ಕೆಲಸ ಮಾಡಬೇಕು. ಹಂಪಿಯ ಸ್ಮಾರಕಗಳು ಮತ್ತು ಪರಿಸರವನ್ನು ನೋಡಲು ಬರುವ ಪ್ರವಾಸಿಗರು ಕನ್ನಡ ವಿವಿಗೆ ಆಗಮಿಸಿ ಇಲ್ಲಿನ ಪುಸ್ತಕಗಳನ್ನು ವೀಕ್ಷಣೆಗೆ ಮುಂದಾಗಬೇಕು ಎಂದರು.

ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಯಾವುದೇ ವಿವಿಯಲ್ಲೂ ಇಲ್ಲದ ಸಂಶೋಧನಾ ಕಾಳಜಿ ಕನ್ನಡ ವಿವಿಯಲ್ಲಿದೆ. ಇಲ್ಲಿಯವರೆಗೆ ಒಟ್ಟಾರೆ 1650 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದೆ. ಪ್ರಸಾರಂಗದಿAದ ಉತ್ಕೃಷ್ಟ ಗುಣಮಟ್ಟದ ಸಂಶೋಧಾನತ್ಮಕ ಪುಸ್ತಕಗಳ ಪ್ರಕಟಣೆಗೆ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ನಿರ್ಲಕ್ಷö್ಯಕ್ಕೊಳಗಾದ ಅನೇಕ ವಿಷಯಗಳನ್ನು ತಳಮಟ್ಟದಿಂದ ಸಂಶೋಧನೆಯನ್ನು ಮಾಡಿ ಪುಸ್ತಕಗಳನ್ನು ಪ್ರಕಟಿಸಲಾಗುತ್ತಿದೆ. ಸರ್ಕಾರದ ಅನುದಾನದ ಕೊರತೆಯ ನಡುವೆಯು ಸಂಶೋಧನೆ ನಿರಂತರವಾಗಿ ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಉತ್ತಮವಾದ ಪುಸ್ತಕಗಳು, ಚಿಂತಕರ ಆಲೋಚನೆಗಳು ಪುಸ್ತಕದ ರೂಪದಲ್ಲಿ ಓದುಗರ ಕೈ ಸೇರಬೇಕು. ಅತ್ಯಂತ ಕಡಿಮೆ ಬೆಲೆಗೆ ಪ್ರಸಾರಂಗ ಪುಸ್ತಕಗಳನ್ನು ಪ್ರಕಟಿಸುತ್ತದೆ ಎಂದರು.

ಕುಲಸಚಿವ ಡಾ.ವಿಜಯ್ ಪೂಣ್ಣಚ್ಚ ತಂಬAಡವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಹೆಚ್ಚು ಪುಸ್ತಕಗಳು ಮಾರಾಟವಾಗಿವೆ. ನಾಡಿನ ಎಲ್ಲೆಡೆ ವಿವಿಯ ಜ್ಞಾನವನ್ನು ತಲುಪಿಸುವ ಕೆಲಸ ನಡೆಯುತ್ತಿದೆ. ಪ್ರಸಾರಾಂಗವು ಸಾಮಾಜಿಕ, ರಾಜಕೀಯ, ಸಾಹಿತ್ಯ, ಚರಿತ್ರೆ, ವಿಜ್ಞಾನ ಹೀಗೆ ಎಲ್ಲ ಪ್ರಕಾರದ ಪುಸ್ತಕಗಳನ್ನು ಪ್ರಕಟಿಸಿಕೊಂಡು ಬಂದಿದೆ. ಪ್ರಸಾರಾಂಗದ ಹೊಸ ಕಟ್ಟಡ ನಿರ್ಮಾಣ ಶೇ.80 ರಷ್ಟು ಪೂರ್ಣಗೊಂಡಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ನಿಗಮದಿಂದ ಅನುದಾನ ಬಿಡುಗಡೆಯಾದರೆ ಶೀಘ್ರವೇ ಕಟ್ಟಡ ನಿರ್ಮಾಣ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net