ಪ್ರಕರಣ ವಾಪಸ್ ಪಡೆದ ಸರ್ಕಾರ

suryakanth nagmarpalli
Published on

ಬೀದರ್: ಕೋಸಂನ ಪೂಜಾ ಹಡಪದ ಹತ್ಯೆ ವಿರೋಧಿಸಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ. ಪೂಜಾ ಹಡಪದ ಪ್ರಕರಣ ವಿರೋಧಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಕಾರ್ಯಕರ್ತರ ವಿರುದ್ಧ ನಗರದ ಮಾರ್ಕೇಟ್, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಮಾಯಕರ ವಿರುದ್ಧದ ಪ್ರಕರಣ ವಾಪಸ್ ಪಡೆಯುವಂತೆ ಸರ್ಕಾರವನ್ನು ಹಲವು ಬಾರಿ ಕೋರಿದ್ದರ ಫಲವಾಗಿ ಮುಖ್ಯಮಂತ್ರಿಯವರು ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net