ಪ್ರಕೃತಿಯ ಸಂರಕ್ಷಣೆ ಅನಿವಾರ್ಯ

20ankola1
Published on

ಅಂಕೋಲಾ: ಪ್ರಕೃತಿಯನ್ನು ಕಾಪಾಡಿಕೊಂಡು ಹೋಗದಿದ್ದರೆ ಮುಂದೆ ನಾವೆಲ್ಲ ದೊಡ್ಡ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ತಹಸೀಲ್ದಾರ್ ಉದಯ ಕುಂಬಾರ ಹೇಳಿದರು.

ಪಟ್ಟಣದ ಸತ್ಯಾಗ್ರಹ ಸ್ಮಾರಕ ಸಭಾಭವನದ ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ನಿಮಿತ್ತ ಸೋಮವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವೆ ಮಾತನಾಡಿ, ಗಿಡಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕಿದೆ. ತಮ್ಮಲ್ಲಿ ಜಾಗವಿಲ್ಲದಿದ್ದರೆ ಸಾರ್ವಜನಿಕ ಸ್ಥಳದಲ್ಲಾದರೂ ಸಸಿಗಳನ್ನು ನೆಟ್ಟು ಪೋಷಿಸಬೇಕು. ಇದರಿಂದ ಮುಂದಿನ ಪೀಳಿಗೆಗೆ ಅನುಕೂಲವಾಗಲಿದೆ. ವಾತಾವರಣ ಉತ್ತಮವಾಗಿದ್ದರೆ ಹಲವು ಕಾಯಿಲೆಗಳನ್ನು ಕೂಡ ತಡೆಗಟ್ಟಬಹುದು ಎಂದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪಿ.ವೈ. ಸಾವಂತ, ಪುರಸಭೆ ಮುಖ್ಯಾಧಿಕಾರಿ ಬಿ. ಪ್ರಹ್ಲಾದ, ವಲಯ ಅರಣ್ಯಾಧಿಕಾರಿ ವಿ.ಪಿ. ನಾಯ್ಕ, ಅಂಕೋಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ನಾಗರಾಜ ಮಂಜಗುಣಿ, ವಿದ್ಯಾಧರ ಮೊರಬಾ, ಕೋಶಾಧ್ಯಕ್ಷ ವಾಸುದೇವ ಗುನಗಾ, ಜಿಲ್ಲಾ ಸಮಿತಿ ಸದಸ್ಯ ಕೆ. ರಮೇಶ, ಸದಸ್ಯ ಅಕ್ಷಯ ನಾಯ್ಕ ಬೊಬ್ರುವಾಡ ಇದ್ದರು. ಸಂಘದ ಅಧ್ಯಕ್ಷ ರಾಘು ಕಾಕರಮಠ ಸ್ವಾಗತಿಸಿದರು. ಕಾರ್ಯದರ್ಶಿ ಸುಭಾಸ ಕಾರೇಬೈಲ್, ಸಹ ಕಾರ್ಯದರ್ಶಿ ಅರುಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net