ಪ್ರಗತಿ ಸಾಧಿಸಲು ಶಿಕ್ಷಣ ಅತ್ಯವಶ್ಯಕ

oppo_2
oppo_2
Published on

ಚಾಮರಾಜನಗರ: ಎಲ್ಲ ಕ್ಷೇತ್ರಗಳಲ್ಲಿ ಪರಿಪೂರ್ಣವಾಗಿ ಪ್ರಗತಿ ಸಾಧಿಸಲು ಶಿಕ್ಷಣ ಅತ್ಯವಶ್ಯಕ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ತಿಳಿಸಿದರು.

ತಾಲೂಕಿನ ಕಾಗಲವಾಡಿಯಲ್ಲಿರುವ ವಿಭ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ವಿಭೋತ್ಸವ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಾಲಕರು ತಮ್ಮ ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸಮೃದ್ಧ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಹೊರನಾಡು ಕನ್ನಡಿಗ ಉ.ಮ.ರೇವಣ್ಣ ಮಾತನಾಡಿ, ಒಂದು ಮಗುವಿಗೆ ತಾಯಿ ಸಂಸ್ಕಾರದ ಬೀಜ ಬಿತ್ತಿದರೆ, ಶಿಕ್ಷಕರು ಅದನ್ನು ಪೋಷಿಸಿ ಬೆಳೆಸಬೇಕು. ಅಜ್ಞಾನದಿಂದ ಜ್ಞಾನದೆಡೆಗೆ ಕರೆದೊಯ್ಯುವುದೇ ಶಿಕ್ಷಣದ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಾಹಿತಿ ಸೋಮಶೇಖರ ಬಿಸಲವಾಡಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದು ಸಮಾಜ ಸೇವಕರಿಂದ ಮಾತ್ರ ಸಾಧ್ಯ ಎಂದರು.

ಶಾಲಾ ಸಂಸ್ಥಾಪಕ ದುಗ್ಗಟ್ಟಿ ಪಿ.ವೀರಭದ್ರಪ್ಪ, ಸಂಸ್ಥೆ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭದ್ರಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಸದಸ್ಯರಾದ ಗಣೇಶ್, ಭಾಗ್ಯಮ್ಮ, ಮುಖ್ಯಶಿಕ್ಷಕಿ ಸವಿತಾ, ಶಿಕ್ಷಕರಾದ ಮಹೇಶ್ವರಿ, ಭಾಗ್ಯಾ, ಗುಂಬಳ್ಳಿ ಬಸವರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net