ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

13KMD-1
ಮಳವಳ್ಳಿಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕೆ.ಎಂ.ದೊಡ್ಡಿಯಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
Published on

ಕೆ.ಎಂ.ದೊಡ್ಡಿ: ಮಳವಳ್ಳಿಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಗುರುವಾರ ಇಲ್ಲಿನ ಮದ್ದೂರು-ಮಳವಳ್ಳಿ ಮುಖ್ಯ ರಸ್ತಯೆಯ ವಿಶ್ವೇಶ್ವರಯ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಸಿ.ಎ.ಕೆರೆ ಹೋಬಳಿ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ತೊರೆಚಾಕನಹಳ್ಳಿ ಶಂಕರೇಗೌಡ ಮಾತನಾಡಿ, ಪಾಠ ಹೇಳಿಕೊಡುವ ನೆಪದಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಕಾಮುಕ ಶಿಕ್ಷಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಬಳಿಕ ನಾಡಕಚೇರಿಗೆ ತೆರಳಿ ಉಪ ತಹಸೀಲ್ದಾರ್ ಶಿವಲಿಂಗಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಡಿ.ಎ.ಕೆರೆ ಲತಾ , ದಲಿತ ಮುಖಂಡ ಮಣಿಗೆರೆ ಕಬ್ಬಾಳಯ್ಯ , ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್, ಆಸರೆ ಸೇವಾ ಟ್ರಸ್ಟ್ ಅಧ್ಯಕ್ಷ ರಘು ವೆಂಕಟೇಗೌಡ, ಪ್ರಜಾಪ್ರಿಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಬಿ.ಹಳ್ಳಿ ವೆಂಕಟೇಶ್, ಗ್ರಾಪಂ ಸದಸ್ಯ ಮಂಜುನಾಥ್, ಕರಡಕೆರೆ ವಸಂತಮ್ಮ, ಡಿ.ಎ.ಕೆರೆ ಶೋಭಾ, ಯಡಗನಹಳ್ಳಿ ರಮೇಶ್, ಇಂದಿರಾ , ಪೂರ್ಣಿಮಾ , ಮನು , ಅಭಿಷೇಕ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net