ಪ್ರಚಾರ ವಾಹನಗಳಿಗೆ ಚಾಲನೆ

Renukacharya Jayanti prachar Vahan inaguration 4-3-2023
Published on

ಬೀದರ್: ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಪ್ರಚಾರ ವಾಹನಗಳಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಪ್ಪ ವಾಲಿ ಇಲ್ಲಿಯ ಗಣೇಶ ಮೈದಾನದಲ್ಲಿ ಚಾಲನೆ ನೀಡಿದರು.
ಮಾ. 5 ರಂದು ನಗರದಲ್ಲಿ ನಡೆಯಲಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಸರ್ವ ಸಮುದಾಯಗಳ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಜಯಂತಿ ಯಶಸ್ವಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.
ಜಯಂತಿ ಪ್ರಯುಕ್ತ ಐದು ಪ್ರಚಾರ ವಾಹನಗಳಿಗೆ ಚಾಲನೆ ಕೊಡಲಾಗಿದೆ. ವಾಹನಗಳು ಜಿಲ್ಲೆಯಾದ್ಯಂತ ಸಂಚರಿಸಿ ಜನರಿಗೆ ಜಯಂತಿಗೆ ಆಮಂತ್ರಿಸಲಿವೆ ಎಂದು ಯುಗಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಿದ್ರಾಮಯ್ಯ ಸ್ವಾಮಿ ತಿಳಿಸಿದರು.
ಜಯಂತಿ ಅಂಗವಾಗಿ ಭಾನುವಾರ ಸಂಜೆ 4ಕ್ಕೆ ಬಸವೇಶ್ವರ ವೃತ್ತದಿಂದ ರಂಗ ಮಂದಿರ ವರೆಗೆ ಅಲಂಕೃತ ರಥದಲ್ಲಿ ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ಕಲಾ ತಂಡಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿವೆ. ರಂಗ ಮಂದಿರದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ ಎಂದು ಯುಗಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಯ್ಯ ಸ್ವಾಮಿ ತಿಳಿಸಿದರು.
ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ವೈಭವದಿಂದ ಜರುಗಲಿದೆ. ಯುವಕರು ಮೆರವಣಿಗೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಡಾ. ರಜನೀಶ್ ವಾಲಿ ಕೋರಿದರು.
ಮುಖಂಡರಾದ ವಿರೂಪಾಕ್ಷ ಗಾದಗಿ, ಸಂಜು ಸಿದ್ದಾಪುರ, ಮಹಾಲಿಂಗ ಸ್ವಾಮಿ ಚಟ್ನಳ್ಳಿ, ರೇವಣಸಿದ್ದಯ್ಯ ಸ್ವಾಮಿ, ವರದಯ್ಯ ಸ್ವಾಮಿ ಮತ್ತಿತರರು ಇದ್ದರು.

ಸಾರ್ವಜನಿಕ ಸಮಾರಂಭ

ಬೀದರ್: ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ನಿಮಿತ್ತ ನಗರದಲ್ಲಿ ಮಾ. 5 ರಂದು ರೇಣುಕಾಚಾರ್ಯರ ಭಾವಚಿತ್ರದ ಭವ್ಯ ಮೆರವಣಿಗೆ ಹಾಗೂ ಸಾರ್ವಜನಿಕ ಸಮಾರಂಭ ನಡೆಯಲಿದೆ. ಸಂಜೆ 4ಕ್ಕೆ ಬಸವೇಶ್ವರ ವೃತ್ತದಿಂದ ಮೆರವಣಿಗೆ ಆರಂಭವಾಗಿ ಪ್ರಮುಖ ಬೀದಿಗಳ ಮೂಲಕ ಹಾಯ್ದು ರಂಗ ಮಂದಿರ ತಲುಪಲಿದೆ. ಬಳಿಕ ರಂಗ ಮಂದಿರದಲ್ಲಿ ವೇದಿಕೆ ಸಮಾರಂಭ ಜರುಗಲಿದೆ. ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಇರಲಿದೆ ಎಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net