ಪ್ರಜೆಗಳ ರಕ್ಷಣೆಗೆ ಹೋರಾಡಿದ ಕೆಂಪೇಗೌಡ

27Rayabag1A
Published on

ರಾಯಬಾಗ: ನಾಡಪ್ರಭು ಕೆಂಪೇಗೌಡರು ಕೇವಲ ಬೆಂಗಳೂರು ನಿರ್ಮಾತೃ ಅಷ್ಟೇ ಅಲ್ಲದೆ, ಪ್ರಜೆಗಳ ರಕ್ಷಣೆಗೆ ಹೋರಾಡಿದ ಧೀಮಂತ ನಾಯಕ ಎಂದು ತಹಸೀಲ್ದಾರ್ ಸುರೇಶ ಮುಂಜೆ ಹೇಳಿದರು.

ಪಟ್ಟಣದ ಮಹಾವೀರ ಶಾಲೆಯಲ್ಲಿ ತಾಲೂಕಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರು ಬದುಕು ಕಟ್ಟಿಕೊಳ್ಳಲು ನೂರಾರು ಕೆರೆ-ಕಟ್ಟೆಗಳನ್ನು ನಿರ್ಮಿಸಿರುವ ಶ್ರೇಯಸ್ಸು ಹೊಂದಿದ್ದಾರೆ ಎಂದರು.

ಆರ್‌ವಿಆರ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಎಂ.ಬೆಂಡೆ ಮಾತನಾಡಿ, ಕನ್ನಡ ನಾಡಿಗೆ ಮತ್ತು ಬೆಂಗಳೂರಿಗೆ ಕೆಂಪೇಗೌಡರು ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ತಾಲೂಕು ಆಡಳಿತದಿಂದ ಪ್ರಮಾಣ ಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.

ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಎಂ.ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಚಂದರಗಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವಿನೋದ ಮಾವರಕರ, ಹಾಲಪ್ಪ ಪೂಜಾರಿ, ಕಲ್ಪನಾ ಕಾಂಬಳೆ, ಭಾರತಿ ಕಾಂಬಳೆ, ರಾಜು ಕುರಾಡೆ, ವಿನಾಯಕ ಭಾಟೆ ಹಾಗೂ ವಿದ್ಯಾರ್ಥಿಗಳು ಇದ್ದರು. ತಾಲೂಕು ದೈಹಿಕ ಪರಿವೀಕ್ಷಕ ಎಂ.ಪಿ.ಜಿರಗ್ಯಾಳ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net