ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
Published on

ಹಾಸನ: ಪ್ರಜ್ವಲ್ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಪ್ರತಿಭಟನೆ ನಡೆಸಿದರು.
ಸಾರ್ವಜನಿಕ ಜೀವನದಲ್ಲಿ ಅಧಿಕಾರ ಹೊಂದಿರುವ ಆ ಘನತೆಯಿಂದ ನಡೆದುಕೊಳ್ಳಬೇಕು. ಸಭ್ಯತೆ ಮೀರಿದರೆ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಪ್ರಜ್ವಲ್, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಾವಿರಾರು ವಿಡಿಯೋ ಇರುವ ಪೆನ್‌ಡ್ರೈವ್ ಸೋರಿಕೆ ಆಗಿದೆ. ಹಣ, ಅಧಿಕಾರದ ಅಮಲಿನಲ್ಲಿ ನೂರಾರು ಹೆಣ್ಣು ಮಕ್ಕಳ ಘನತೆಗೆ ಗೌರವ ತಂದಿರುವ ಪ್ರಜ್ವಲ್‌ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಎಲ್ಲಾ ಸಂತ್ರಸ್ತ ಮಹಿಳೆಯರೊಂದಿಗೆ ಸರ್ಕಾರ ಆಪ್ತ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ಎಸ್‌ಐಟಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ತನಿಖೆ ಕೈಗೊಂಡು ಸತ್ಯಾಸತ್ಯತೆ ಹೊರ ತಂದು ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸಬೇಕು. ಇಂಥ ಆರೋಪಿಗಳಿಗೆ ಶಿಕ್ಷೆ ಆಗದೇ ಹೋದಲ್ಲಿ ಉಳ್ಳವರಿಗೊಂದು ನ್ಯಾಯ, ಇಲ್ಲದವರಿಗೊಂದು ನ್ಯಾಯ ಎಂಬ ಸಂದೇಶ ರವಾನೆ ಆಗಲಿದೆ. ಹಾಗಾಗಿ ನೀಚ ಕೃತ್ಯ ಎಸಗಿದ ಆರೋಪಿಗೆ ದಂಡನೆ ಆಗಲೇಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ಶ್ರೀನಿವಾಸ್ ಸಾವರ್ಕರ್, ಚಿರಂತ್, ಲೇಪಾಕ್ಷ, ವೇಣು, ಸುಶ್ಮಿತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net