

ಹಾಸನ: ನಮ್ಮ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಈಗಾಗಲೇ ಪ್ರಜ್ವಲ್ ರೇವಣ್ಣ ಅವರೇ ಅವರೇ ಹಾಸನ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿದ್ದು,ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲಗಳಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಹೇಳಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂದರು ಕಳದ ಐದು ವರ್ಷದಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಜಿಲ್ಲೆಯ ಮತದಾರರು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾಗಲೂ ಭಿನ್ನಮತ ಇತ್ತು. ಈಗಲೂ ಆ ರೀತಿಯ ಪರಿಸ್ಥಿತಿ ಇದೆ. ಎರಡೂ ಪಕ್ಷದ ನಾಯಕರು ಒಗ್ಗೂಡಿ ಮೈತ್ರಿ ಗೆಲುವಿಗೆ ಸಹಕರಿಸುತ್ತಾರೆ ಎಂದರು.
ಸಂಸದರು ಕಳೆದ ಐದು ವರ್ಷದಲ್ಲಿ 12 ಸಾವಿರ ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ರೇವಣ್ಣ ಅವರು ಬಿಜೆಪಿ ಸರ್ಕಾರ ಇದ್ದಾಗ ಹೆಚ್ಚು ಅನುದಾನ ತಂದು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರೇ ಗೆಲ್ಲುತ್ತಾರೆ ವಿಶ್ವಾಸ ವ್ಯಕ್ತಪಡಿಸಿದರು.
ಕಳದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ನಮಗೂ ಬಿಜೆಪಿಗೂ ನೇರಾ ನೇರ ಪೈಪೋಟಿ ಇತ್ತು. ಕೆಲವೊಂದು ವಿಷಯಗಳಲ್ಲಿ ಮನಸ್ತಾಪ, ಮಾತುಗಳು ಇರುತ್ತವೆ. ಕೇಂದ್ರ ಮಟ್ಟದಲ್ಲಿ ಹಿರಿಯರು ಒಳ್ಳೆಯ ರೀತಿಯಲ್ಲಿ ಬಗೆಹರಿಸುತ್ತಾರೆ. ನಮ್ಮ ಜಿಲ್ಲೆಯಲ್ಲಿ ಒಳ್ಳೆಯ ಬೆಳವಣಿಗೆ ಆಗುತ್ತೆದೆ. ಎಲ್ಲಾ ಭಿನ್ನಾಭಿಪ್ರಾಯಗಳು ಬಗೆಹರಿಯಲಿದೆ.ಹಾಸನದಲ್ಲಿ ಮೈತ್ರಿ ಅಭರ್ಥಿಗೆ ಗೆಲವು ಎಂದು ಹೇಳಿದರು.