

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೇ 30 ರಂದು ಹಾಸನ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುನಂದಾ ಹೇಳಿದರು.
ಪ್ರಜ್ವಲ್ ರೇವಣ್ಣ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಸಿರುವುದು ಖಂಡನೀಯ. ಈ ಕೃತ್ಯಕ್ಕೆ ಲೋಕಸಭಾ ಸದಸ್ಯರಿಗೆ ನೀಡಿರುವ ವಸತಿಗೃಹ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ವಿಚಾರವಾಗಿದೆ. ಕೂಡಲೇ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ರದ್ದುಗೊಳಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ರಾಜ್ಯ ಸರ್ಕಾರ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕು. ಈ ಸಂಬಂಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಬೇಕು. ರಾಜತಾಂತ್ರಿಕ ವೀಸಾ ರದ್ದು ಪಡಿಸಿ ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಬಂಧಿಸಿ ದೇಶಕ್ಕೆ ಕರೆ ತರಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಪದಾಧಿಕಾರಿಗಳಾದ ಜೆ. ಜಯರಾಂ, ಜಯಂತಿ, ಲತಾ ಇದ್ದರು.