ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ

Vijayasene
Published on

ಚಿತ್ರದುರ್ಗ: ಸ್ತ್ರೀಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ರೇವಣ್ಣ ಅವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜೆಡಿಎಸ್ ಕಚೇರಿ ಮುಂಭಾಗ ಧಿಕ್ಕಾರ ಕೂಗಿದರು. ಕೂಡಲೇ ಸಂಸದ, ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ತಪ್ಪು ಯಾರೇ ಮಾಡಿದರೂ ಶಿಕ್ಷೆಗೆ ಗುರಿಪಡಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಒತ್ತಾಯಿಸಿ ಮನವಿ ರವಾನಿಸಿದರು.

2ಸಾವಿರಕ್ಕೂ ಹೆಚ್ಚು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್, ರೇವಣ್ಣರನ್ನು ಬಂಧಿಸಬೇಕು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಪ್ರಕರಣ ಸಂಬಂಧ ಯಾವುದೇ ರಾಜಕೀಯ ಬಣ್ಣ ಬೆರೆಸದೆ, ಪಕ್ಷದಿಂದ ಉಚ್ಛಾಟಿಸಬೇಕು ಎಂದು ಕೋರಿದರು.

ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಅಧ್ಯಕ್ಷೆ ವೀಣಾ ಗೌರಣ್ಣ, ಪದಾಧಿಕಾರಿಗಳಾದ ಗೋಪಿನಾಥ್, ಅಣ್ಣಪ್ಪ, ರತ್ನಮ್ಮ, ಹರೀಶ್‌ಕುಮಾರ್, ಅವಿನಾಶ್, ನಾಗರಾಜ್ ಮುತ್ತು, ರಾಜಣ್ಣ, ಕಮಲಮ್ಮ, ಸುರೇಶ್, ನಿಸಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net