ಪ್ರಜ್ವಲ್ ರೇವಣ್ಣ ಮಲೆನಾಡಿನ ಸಮಸ್ಯೆ ಬಗೆಹರಿಸಲು ಸಂಪೂರ್ಣ ವಿಫಲ

ಪ್ರಜ್ವಲ್ ರೇವಣ್ಣ ಮಲೆನಾಡಿನ ಸಮಸ್ಯೆ ಬಗೆಹರಿಸಲು ಸಂಪೂರ್ಣ ವಿಫಲ
Published on

ಹಾಸನ: ತಮ್ಮ ಅಧಿಕಾರದ ಅವಧಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಲೆನಾಡಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಕೂಡ, ಅದನ್ನು ಬಗೆಹರಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಮತ್ತು ಜಿ.ಪುಟ್ಟಸ್ವಾಮಿಗೌಡರು ಕಾಲದಲ್ಲಿ ಮಲೆನಾಡಿಗೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ, ಈ ಬಾರಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವಂತೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಚ್.ಪಿ. ಭಾಸ್ಕರ್ ಹಾನುಬಾಳು ತಿಳಿಸಿದರು.
ಸಂಸದರಾಗಿ ಆಯ್ಕೆಯಾದ ಪ್ರಜ್ವಲ್ ರೇವಣ್ಣ ತಮ್ಮ ಅವಧಿಯಲ್ಲಿ ಮಲೆನಾಡಿನ ಕಾಫಿ ಬೆಳೆಗಾರರ ಸಮಸ್ಯೆ, ಕಾಡಾನೆ ಸಮಸ್ಯೆ ಹಾಗೂ ಇನ್ನಿತರೆ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಜೆಡಿಎಸ್‌ಗೆ ಹಲವು ವರ್ಷಗಳಿಂದ ಮಲೆನಾಡಿನ ಜನರು ಮತ ಹಾಕುತ್ತಾ ಬಂದಿದ್ದರು. ಕೂಡ ನಾನಾ ಸಬೂಬುಗಳನ್ನ ಹೇಳುತ್ತಾ ಬಂದಿದ್ದಾರೆ. ಆದರೆ, ಈ ಬಾರಿ ಒಂದು ಅವಕಾಶವನ್ನು ಕಾಂಗ್ರೆಸ್‌ಗೆ ಮಾಡಿಕೊಡುವ ಮೂಲಕ ಮಲೆನಾಡಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ನಾಲ್ಕುವರೆ ವರ್ಷ ಸಂಸದರಾಗಿ ಯಾವುದೇ ಅಬಿವೃದ್ಧಿ ಕೆಲಸ ಮಾಡದೆ. ಈಗ ಪ್ರತಿ ಗ್ರಾಮಗಳಿಗೆ ಮತ್ತು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ನನ್ನಿಂದ ತಪ್ಪಾಗಿದೆ ಕ್ಷಮಿಸಿ, ಮುಂದೆ ಅಂತ ತಪ್ಪು ಮಾಡುವುದಿಲ್ಲ ಎಂದು ಮತ್ತೆ ಮಲೆನಾಡ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಮ್ಮ ಸರ್ಕಾರ ಜಾರಿಗೆ ತಂದಂತಹ 5 ಗ್ಯಾರಂಟಿಗಳು ಕಟ್ಟ ಕಡೆಯ ವ್ಯಕ್ತಿಗೂ ಕೂಡ ತಲುಪಿದೆ. ಅದಲ್ಲದೆ ಈ ಹಿಂದೆ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಅವರು ಕಾಫಿ ಬೆಳಗಾರರ ಹಿತ ಕಾಯಲು ಸುಮಾರು 70 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಿದ್ದರು. ಜಿ ಪುಟ್ಟಸ್ವಾಮಿಗೌಡರು ಸಂಸದರಾಗಿ ಮತ್ತು ಮಂತ್ರಿಯಾಗಿ ಜಿಲ್ಲೆಯ ಹಲವು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದರು. ಆದ್ದರಿಂದ, ಈ ಬಾರಿ ಅವರ ಮೊಮ್ಮಗ ಸೇರ್ಪಡೆ ಅವರನ್ನು ಜಿಲ್ಲೆಯ ಜನರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಡಿ.ಸಿ. ಸಣ್ಣಸ್ವಾಮಿ, ವೈ.ಪಿ. ರಾಜೇಗೌಡ, ಶೀತಲ್ ಹಾಜರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net