ಪ್ರಜ್ವಲ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ

DSC_0096--0001
Published on

ಚಿತ್ರದುರ್ಗ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸ್ವಯಂ ಪ್ರೇರಿತವಾಗಿ ಪೋಕ್ಸೋ ದೂರು ದಾಖಲಿಸುವಂತೆ ವಕೀಲ ಡಾ.ಎಂ.ಸಿ.ನರಹರಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಪ್ರಜ್ವಲ್ ವಿರುದ್ಧದ ತನಿಖೆಗೆ ರಚಿಸಿರುವ ಎಸ್‌ಐಟಿ ತನಿಖೆ ತೀವ್ರಗೊಳಿಸಿ, ಗಲ್ಲು ಶಿಕ್ಷೆ ಕೊಡಿಸಬೇಕೆಂದು ಆಗ್ರಹಿಸಿದರು.
ಸಂತ್ರಸ್ತೆಯ ದೂರು ಆಧರಿಸಿ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮಗಳಿಗೂ ಪ್ರಜ್ವಲ್ ಕಿರುಕುಳ ನೀಡಿದ್ದಾನೆಂದು ಸಂತ್ರಸ್ತೆ ಹೇಳಿದ್ದು, ಅಪ್ರಾಪ್ತೆಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಾಧ್ಯತೆ ಇದೆ. ಆದ್ದರಿಂದ ಪೋಕ್ಸೋ ಕಾಯ್ದೆಯಡಿ ತನಿಖೆ ನಡೆಸಬೇಕು ಎಂದು ಒತ್ತಾಯಿ ಸಿದರು. ಸಂತ್ರಸ್ತೆ ಪರವಾಗಿ ನ್ಯಾಯ ಕೊಡಿಸುವ ವಕೀಲರಿಗೆ ನನ್ನ ಬೆಂಬಲ ಎಂದರು. ಓಬಳೇಶ್, ಶಶಿಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net