ಪ್ರಣಾಳಿಕೆಯ ಭರವಸೆಗಳು ಈಡೇರಲಿವೆ

4ark3
ಅರಕಲಗೂಡು ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಶ್ರೀಧರ್‌ಗೌಡ ಅವರ ಪರ ಪತ್ನಿ ಐಶ್ವರ್ಯಾ ಮತಯಾಚಿಸಿದರು.
Published on

ಅರಕಲಗೂಡು: ತಾಲೂಕಿನ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಶ್ರೀಧರ್‌ಗೌಡ ಪರ ಪತ್ನಿ ಐಶ್ವರ್ಯಾ ಮತಪ್ರಚಾರ ನಡೆಸಿದರು.

ತಾಲೂಕಿನ ಕಸಬಾ, ದೊಡ್ಡಮಗ್ಗೆ, ಕೊಣನೂರು ಹೋಬಳಿ ಭಾಗದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರೆಯಿತು.

ಕಾಂಗ್ರೆಸ್ ಜನಸಾಮಾನ್ಯರ ಪಕ್ಷವಾಗಿದ್ದು , ಎಲ್ಲ ವರ್ಗದ ಜನರಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದೆ. ಮಹಿಳೆಯರಿಗೆ ಎರಡು ಸಾವಿರ ರೂ. ನೀಡಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದೊಡನೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಲಿವೆ. ಮುಖ್ಯವಾಗಿ ಮಹಿಳೆಯರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net