ಪ್ರಣಾಳಿಕೆಯಂತೆ ಸಮೀಕ್ಷೆ, ಸಚಿವ ಸುಧಾಕರ್ ಹೇಳಿಕೆ

CTD SAMIKESHE-----------
Published on

ಚಿತ್ರದುರ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದೆಂಬ ಕಾಂಗ್ರೆಸ್ ಪ್ರಣಾಳಿಕೆ ಭರವಸೆಯಂತೆ, ರಾಜ್ಯಾದ್ಯಂತ ಸಮೀಕ್ಷೆ ಕಾರ‌್ಯ ಪ್ರಾ ರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ವೀರ ವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣ ಸಮೀಪದ ಬುದ್ಧ ನಗರದಲ್ಲಿ ಸೋಮವಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾತಿ ಗಣತಿ ಮಾಡುತ್ತಿಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಅಂಕಿ-ಅಂಶಗಳ ಮೂಲಕ ಸಂಗ್ರಹಿಸುವುದು, ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ದೊರಕಿಸಲಾಗುವುದು ಎಂದರು.

ಸಮೀಕ್ಷೆಗಾಗಿ ಜಿಲ್ಲೆಯಲ್ಲಿ 4,62,280 ಮನೆಗಳನ್ನು ಗುರುತಿಸಲಾಗಿದೆ. 3768 ಗಣತಿದಾರರು, 376 ಮೇಲ್ವಿಚಾರಕರು, 92 ಮಾಸ್ಟರ್ ಟ್ರೈನರ್ಸ್‌ ನೇಮಿಸಲಾಗಿದೆ. ಸಮೀಕ್ಷೆಯಲ್ಲಿ 60 ಪ್ರಶ್ನಾವಳಿಗಳಿವೆ. ಆಧಾರ್ ಅಥವಾ ರೇಷನ್ ಕಾರ್ಡ್ ಆಧರಿಸಿ ಸಮೀಕ್ಷೆ ನಡೆಸಲಾಗುತ್ತಿ ದೆ. ಆಶಾ ಕಾರ‌್ಯಕರ್ತೆಯರು ಹಾಗೂ ಎನ್‌ಆರ್‌ಎಲ್‌ಎಂ ಮೂಲಕ ಮನೆಗಳಿಗೆ ಭೇಟಿ ನೀಡಿ ಕುಟುಂಬ ಅನುಸೂಚಿ ನಮೂನೆಗಳನ್ನು ವಿತರಿಸಿ ಈ ಕುರಿತು ಜನರಲ್ಲಿ ಅರಿವು ಮೂಡಿಸಿದ್ದಾರೆ. 4,31,000 ಕುಟುಂಬ ಅನುಸೂಚಿ ನಮೂನೆಗಳನ್ನು ಜಿಲ್ಲೆಯಲ್ಲಿ ಹಂಚಿಕೆ ಮಾಡ ಲಾಗುತ್ತಿದೆ. ಗಣತಿದಾರರಿಗೆ 3491 ಕೈಪಿಡಿ ವಿತರಿಸಲಾಗಿದೆ. ಗಣತಿದಾರರಿಗೆ ಅವಶ್ಯವಿರುವ ಗುರುತಿನ ಚೀಟಿಗಳನ್ನು ಕೊಡಲಾಗಿದೆ ಎಂ ದು ಸಚಿವರು ತಿಳಿಸಿದರು.

ಸಹಾಯವಾಣಿ

ಸಮೀಕ್ಷೆಗಾಗಿ ಜಿಲ್ಲೆಯ 6 ತಾಲೂಕುಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು, ಗಣತಿದಾರರು ಯಾ ವುದೇ ಪ್ರಶ್ನಾವಳಿಗಳ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಅನಿತಾ ರಮೇಶ್, ಸದಸ್ಯೆ ಶ್ರೀದೇವಿ ಚಕ್ರವರ್ತಿ, ಆಯುಕ್ತೆ ಲಕ್ಷ್ಮೀ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಡಾ. ಎಸ್.ಆಕಾಶ್, ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ತಹಸೀಲ್ದಾರ್ ಗೋವಿಂದರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net