ಪ್ರತಿ ಗ್ರಾಪಂ ಮಟ್ಟದಲ್ಲೂ ಸಾರ್ವಜನಿಕರ ಸಭೆ : ಶಾಸಕ ಎ.ಆರ್.ಕೃಷ್ಣಮೂರ್ತಿ ಭರವಸೆ

22 yelandur 12
Published on



ಚಾಮರಾಜನಗ: ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರ ಸಭೆ ಮಾಡಿ ಅವರ ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಭರವಸೆ ನೀಡಿದರು.


ಯಳಂದೂರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಕೊಳ್ಳೇಗಾಲ, ಯಳಂದೂರು, ಸಂತೇಮರಹಳ್ಳಿ ವ್ಯಾಪ್ತಿಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ಕರೆದು ಪಕ್ಷ ಭೇದ ಮರೆತು ಪ್ರತಿಯೊಬ್ಬರ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದು ತಿಳಿಸಿದರು.


ಪ.ಪಂ. ಸದಸ್ಯರಾದ ಮಹೇಶ್, ರಂಗನಾಥ್, ಜಿ.ಪಂ. ಮಾಜಿ ಸದಸ್ಯರಾದ ಜೆ.ಯೋಗೇಶ್, ಕೇತಮ್ಮ, ದಾಸ, ತಾ.ಪಂ. ಮಾಜಿ ಸದಸ್ಯ ವೈ.ಕೆ.ಮೋಳೆ ನಾಗರಾಜು, ನಿರಂಜನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರು, ಪ್ರಧಾನ ಕಾರ್ದರ್ಶಿ ಯರಿಯೂರು ಪ್ರಕಾಶ್, ಮುಖಂಡರಾದ ದಾಸನಹುಂಡಿ ಜೀವನ್ ಗೌಡ್, ಹೊನ್ನೂರು ಎಚ್.ಪಿ.ಸಿದ್ದರಾಜು, ದೊಡ್ಡಯ್ಯ, ಚಕ್ರವರ್ತಿ, ವೈ.ಕೆ.ಮೋಳೆ ಸ್ವಾಮಿ. ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net