

ಚಿತ್ರದುರ್ಗ: ಸ್ವಾತಂತ್ರ್ಯ ಮಹೋತ್ಸವದ ಹಿನ್ನಲೆಯಲ್ಲಿ ಆ.13ರಿಂದ 15ರ ವರೆಗೆ ಹರ್‌ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಸ್ವಾತಂತ್ರೊೃೀತ್ಸವ ಆಚರಣೆ ಹಿನ್ನೆಲೆಯಲ್ಲಿ ಡಿಸಿ ಕಚೇರಿಯಲ್ಲಿ ಸೋಮವಾರ ಅಭಿಯಾನದ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, 78ನೇ ಸ್ವಾತಂತ್ರ್ಯಮಹೋತ್ಸವ ಅಂಗವಾಗಿ 3 ದಿನಗಳ ಕಾಲ ಜಿಲ್ಲೆಯ ಜನರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯುವಂತೆ ಮನವಿ ಮಾಡಿದರು.
ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದ ಹಾಗೆ ಪ್ರತಿಯೊಬ್ಬರು ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅದರ ಸೆಲ್ಫಿಯನ್ನು ವೆಬ್‌ಸೈಟ್ ಚ್ಟಜಚ್ಟಠಿಜ್ಟಿಚ್ಞಜ.್ಚಟಞಅಪ್‌ಲೋಡ್ ಮಾಡಬೇಕು ಎಂದರು.
ಜಿಲ್ಲೆಯ ಎಲ್ಲ ಗ್ರಾಪಂ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಸಂಘ-ಸಂಸ್ಥೆಗಳು, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಧ್ವಜಾರೋಹಣ ಸಂದರ್ಭದಲ್ಲಿ ಧ್ವಜ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು. ಸ್ವಾತಂತ್ರ್ಯಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಬೇಕು. ನಿತ್ಯ ಸಂಜೆ ಸೂರ್ಯಾಸ್ತದ ಮೊದಲು ಧ್ವಜವನ್ನು ಇಳಿಸಬೇಕು ಎಂದು ತಿಳಿಸಿದರು.
ಅಭಿಯಾನದ ಅಂಗವಾಗಿ ಸ್ಥಳೀಯ ಸಂಸ್ಥೆಗಳು, ನಗರಸಭೆ, ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಯೋಗದೊಂದಿಗೆ ಆ.13ರಂದು ಬೈಕ್ ರ‌್ಯಾಲಿ ಆಯೋಜಿಸಬೇಕು. 14ರ ಬೆಳಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಿರಂಗಾ ಯಾತ್ರೆ ನಡೆಯಲಿದೆ ಎಂದರು.
ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಲು ಚಿತ್ರಕಲೆ, ದೇಶಭಕ್ತಿ ಗೀತೆ, ಆಶುಭಾಷಣ ಸೇರಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಅಂದು ಸಂಜೆ 5.30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ದೇಶಭಕ್ತಿ ಗೀತೆಗಳ ಗೀತಗಾಯನ ಕಾರ‌್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸರ್ಕಾರಿ ಕಚೇರಿಗಳ ಮುಖ್ಯಸ್ಥರು, ಸಿಬ್ಬಂದಿ ಪಾಲ್ಗೊಳ್ಳಬೇಕೆಂದು ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ 5 ಸಾವಿರ ರಾಷಟ್ರೆಧ್ವಜಗಳು ಲಭ್ಯವಿದ್ದು, ಪ್ರತಿ ರಾಷ್ಟ್ರಧ್ವಜಕ್ಕೆ 26 ರೂ. ದರ ನಿಗದಿಪಡಿಸಲಾಗಿದೆ. ಅಂಚೆ ಕಚೇರಿ, ರೈಲ್ವೆ ನಿಲ್ದಾಣಗಳಲ್ಲೂ ರಾಷ್ಟ್ರಧ್ವಜ ವಿತರಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ, ಜಿಪಂ ಉಪಕಾರ‌್ಯದರ್ಶಿ ಕೆ.ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್.ಬಣಕಾರ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸುಬ್ರಾನಾಯ್ಕಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಅಬಕಾರಿ ಅಧೀಕ್ಷಕ ವಿಶ್ವನಾಥ್ ಮತ್ತಿತರ ಅಧಿಕಾರಿಗಳಿದ್ದರು.