

ಚಿತ್ರದುರ್ಗ: ಪ್ರತಿ ಮನೆಗೆ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಜಲಜೀವನ್ ಮಿಷನ್ ಕುರಿತ ‘ಮನೆ ಮನೆಗೆ ಗಂಗೆ’ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಡಿಸಿ ಬಿ.ಟಿ.ಕುಮಾರಸ್ವಾಮಿ ಅವರು ಶನಿವಾರ ಹಸಿರು ನಿಶಾನೆ ತೋರಿಸಿದರು.
ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಂಪನ್ಮೂಲ ಸಂಸ್ಥೆ ರೀಡ್ಸ್ ಸಹಯೋಗದಲ್ಲಿ ಡಿಸಿ ಕಚೇರಿ ಆವರಣದಲ್ಲಿ ಜಲಜೀವನ್ ಮಿಷನ್ ಯೋಜನೆ, ಸ್ವಚ್ಛ ಭಾರತ್ ಮಿಷನ್ ಯೋಜನೆ ಮಾಹಿತಿ ಶಿಕ್ಷಣ ಹಾಗೂ ಸಂವಹನ ಚಟುವಟಿಕೆ ಆಟೋ ಪ್ರಚಾರ ಪ್ರಾರಂಭವಾಯಿತು.
ಜೆಜೆಎಂ ಅಡಿ ಪ್ರತಿ ಮನೆಗೆ ಶುದ್ಧ ಕುಡಿವ ನೀರು ಒದಗಿಸುವುದು, ಕಲುಷಿತ ನೀರು ಸೇವನೆಯಿಂದ ಆಗುವ ದುಷ್ಪರಿಣಾಮ,ಕ್ಷೇತ್ರ ಪರೀಕ್ಷಾ ಕಿಟ್(ಎಫ್‌ಟಿಕೆ)ಬಳಸಿ ನೀರಿನ ಗುಣಮಟ್ಟದ ಪರೀಕ್ಷೆ ನಡೆಸುವುದು, ಶುಚಿತ್ವ, ಬೂದು ನೀರು ನಿರ್ವಹಣೆ, ಮಳೆ ನೀರು ಕೊಯ್ಲು, ಪ್ಲಾಸ್ಟಿಕ್ ಬಳಕೆ ನಿಷೇಧ, ಶೌಚಗೃಹ ಬಳಕೆ, ಹಸಿಕಸ, ಒಣ ಕಸ ವಿಂಗಡಣೆೆ ಕುರಿತು ಪ್ರತಿ ಗ್ರಾಮದಲ್ಲಿ ಆಟೋ ಮೂಲಕ ಪ್ರಚಾರ ಮಾಡಲಾಗುತ್ತಿದೆ.
ಜಿಪಂ ಡಿಎಸ್ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಬಸನಗೌಡ ಮೇಟಿ ಪಾಟೀಲ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ್ ಎಸ್.ನಾಡರ್, ರೀಡ್ಸ್‌ನ ಜಿ.ಎಸ್.ನಾಗರಾಜ, ಪ್ರತಾಪ, ರಘುಪತಿ ಮತ್ತಿತರರು ಇದ್ದರು.