ಪ್ರತಿ ಮನೆಗೆ ಮಲಪ್ರಭಾ ನೀರು

h28-munenakoppa
Published on

ನವಲಗುಂದ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ‘ಜಲಜೀವನ ಮಿಷನ್’ ಅಡಿ ಪ್ರತಿ ಗ್ರಾಮಕ್ಕೆ ಮಲಪ್ರಭಾ ನದಿ ನೀರು ಸರಬರಾಜು ಮಾಡುವ ಯೋಜನೆಗೆ ನವಲಗುಂದ ವಿಧಾನಸಭೆ ಕ್ಷೇತ್ರಕ್ಕೆ 115 ಕೋಟಿ ರೂಪಾಯಿ ಬಿಡುಗಡೆಯಾಗಿದೆ.

ಈ ಹಿನ್ನೆಲೆಯಲ್ಲಿ ನವಲಗುಂದ ತಾಲೂಕಿನ ಖನ್ನೂರ ಗ್ರಾಮದಲ್ಲಿ 48 ಲಕ್ಷ, ತಡಹಾಳ ಗ್ರಾಮದಲ್ಲಿ 99 ಲಕ್ಷ ಹಾಗೂ ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದಲ್ಲಿ 234 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪ್​ಲೈನ್ ಅಳವಡಿಸುವ ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗಳಿಗೆ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರು ಸೋಮವಾರ ಭೂಮಿಪೂಜೆ ನೆರವೇರಿಸಿದರು. ‘ಗ್ರಾಮೀಣ ಭಾಗದ ಅಸಮರ್ಪಕ ಕುಡಿಯುವ ನೀರಿನ ಸೌಲಭ್ಯವನ್ನು ಸರಿಪಡಿಸಿ, ಪ್ರತಿ ಮನೆಗೆ ನಿರಂತರವಾಗಿ ನೀರು ಒದಗಿಸುವುದು ಈ ಯೋಜನೆಯ ಉದ್ದೇಶ. ಕ್ಷೇತ್ರದ ಪ್ರತಿ ಮನೆಗೆ ಮಲಪ್ರಭಾ ನದಿ ನೀರು ಒದಗಿಸುವ ಕನಸು ನನಸಾಗಿದೆ’ ಎಂದರು. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net