ಪ್ರತಿಜ್ಞಾ ವಿಧಿ ಸ್ವೀಕಾರ

IMG_20221028_110658
Published on

ನಾಗಮಂಗಲ: ಪಟ್ಟಣದ ಶ್ರೀ ಸೌಮ್ಯಾಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಶುಕ್ರವಾರ ತಹಸೀಲ್ದಾರ್ ನಂದೀಶ್ ನೇತೃತ್ವದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು.ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಶಾಲಾ- ಮಕ್ಕಳು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನರು ಕನ್ನಡ ನಾಡು-ನುಡಿ ಕುರಿತ ಗೀತೆಗಳನ್ನು ಸಾಮೂಹಿಕವಾಗಿ ಹಾಡಿದರು. ನಂತರ ಕನ್ನಡ ಭಾಷೆಯನ್ನೆ ಮಾತನಾಡುತ್ತೇನೆಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು.ತಾಪಂ ಇಒ ಚಂದ್ರಮೌಳಿ, ಬಿಇಒ ಸುರೇಶ್, ಎಆರ್‌ಟಿಒ ಹನುಂತರಾಯಪ್ಪ, ಅಬಕಾರಿ ನಿರೀಕ್ಷಕಿ ಗೀತಾ, ಡಿವೈಎಸ್ಪಿ ಲಕ್ಷ್ಮೀನಾರಾಯಣಪ್ರಸಾದ್, ಪಿಎಸ್‌ಐ ಸತೀಶ್, ಪಶುಸಂಗೋಪನೆ ಸಹಾಯಕ ನಿರ್ದೇಶಕ ಡಾ.ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣಗೌಡ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net