ಪ್ರತಿಫಲದ ನಿರೀಕ್ಷೆ ಇಲ್ಲದಿದ್ದಾಗ ಮಾತ್ರ ಸೇವೆ ಸಾರ್ಥಕ

Published on

ಚಾಮರಾಜನಗರ: ಸೇವೆಯ ಪ್ರತಿಫಲದ ನಿರೀಕ್ಷೆ ಇಲ್ಲದಿದ್ದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ಮೈಸೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಪ್ರದೀಪ್‌ಕುಮಾರ್ ದೀಕ್ಷಿತ್ ಅಭಿಪ್ರಾಯಪಟ್ಟರು.

ನಗರದ ಜೆಎಸ್‌ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ 2025-26ನೇ ಸಾಲಿನ ಕಾರ್ಯ ಚಟುವಟಿಕೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸೇವೆಯನ್ನು ಸದ್ದಿಲ್ಲದೆ ಮಾಡಿದರೆ ಸಾರ್ಥಕ ಕಾಣಬಹುದು ಎಂದು ಹೇಳಿದರು. ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀದೇವರಾಜಮೂರ್ತಿ, ಕಾರ್ಯಕ್ರಮಾಕಾರಿ ಸಿ.ಗಿರೀಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net