ಪ್ರತಿಭಾ ಕಾರಂಜಿಯಿಂದ ಪ್ರತಿಭೆ ಅನಾವರಣ

16-SDMSEP-03
ಮುಧೋಳದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಸಮನ್ವಯಾಧಿಕಾರಿ ಶಂಕರಲಿAಗಪ್ಪ, ಗ್ರಾಪಂ ಅಧ್ಯಕ್ಷೆ ಮಂಗ್ಲಿಬಾಯಿ ನಾಯಕ್, ಉಪಾಧ್ಯಕ್ಷ ರಾಮರೆಡ್ಡಿ, ಸತ್ಯಕುಮಾರ ಭಾಗೋಡಿ ಇದ್ದರು.
Published on

ಸೇಡಂ: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಒದಗಿಸಲಿದೆ ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಶಂಕರಲಿಂಗಪ್ಪ ಹೇಳಿದರು.

ಮುಧೋಳ ಗ್ರಾಮದ ಸರಸ್ವತಿ ವಿದ್ಯಾಮಂದಿರ ಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಮಾತನಾಡಿದರು.

ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರತಿಭೆಯನ್ನು ಪ್ರದರ್ಶನ ಮಾಡಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು. ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಗಳನ್ನು ನಡೆಸಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಮಂಗ್ಲಿಬಾಯಿ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿ ಸತ್ಯಕುಮಾರ ಭಾಗೋಡಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ರಾಮರೆಡ್ಡಿ, ಅನಿಲಕುಮಾರ ಸುಬೇದಾರ, ಸಹ ಕಾರ್ಯದರ್ಶಿ ಹಣಮಂತರೆಡ್ಡಿ, ಶ್ರೀನಿವಾಸ ಮ್ಯಾಕಲ್, ಗಂಗಾಧರಸ್ವಾಮಿ, ಬಸವಂತರೆಡ್ಡಿ ಬಂಡಿ, ವೀರಣ್ಣಗೌಡ, ಸಾಯಿಬಣ್ಣ, ದೇವೇಂದ್ರಪ್ಪ ಯಾದವ ಇದ್ದರು.

ಸಿಆರ್‌ಪಿ ಶರಣಪ್ಪ ಪರಮಾ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಗುರು ನಾಗೇಶ ಧನವಾಡ ಸ್ವಾಗತಿಸಿದರು. ದಿನೇಶ್ ರಂಗಾಪುರ ನಿರೂಪಣೆ ಮಾಡಿದರು. ಸಿದ್ದಯ್ಯಸ್ವಾಮಿ ಹಿರೇಮಠ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net