

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಸಂಜಯ ಮತ್ತು ಪ್ರಿಯಾ ಆರ್. ಹೊರಡಿ ಹಾಗೂ ದಿ. ಪ್ರೊ. ಆರ್.ವಿ. ಹೊರಡಿ ದತ್ತಿ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ. 20ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಏರ್ಪಡಿಸಿದೆ.
ಕೆ.ಇ.ಬೋರ್ಡ್ ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ. ಮೋಹನ ಸಿದ್ದಾಂತಿ ಅತಿಥಿಯಾಗಿ ಆಗಮಿಸುವರು. ಕರ್ನಾಟಕ ಕಲಾ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ.ಸಿ. ಸವಡಿ ಅಧ್ಯಕ್ಷತೆ ವಹಿಸುವರು.
ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಕರ್ನಾಟಕ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ಕೃತಿಕಾ ಸೂರ್ಯವಂಶಿ, ಸಿದ್ದಲಿಂಗೇಶ ಬೆಂಚಿಹಳ್ಳಿ ಅವರಿಗೆ ಸಂಜಯ ಮತ್ತು ಪ್ರಿಯಾ ಹೊರಡಿ ಪ್ರತಿಭಾ ಪುರಸ್ಕಾರ, ಕರ್ನಾಟಕ ಕಲಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಸಂಗಮೇಶ ಮತ್ತು ಶ್ರೀದೇವಿ ವನಹಳ್ಳಿ ಅವರಿಗೆ ದಿ. ಪ್ರೊ. ಆರ್.ವಿ. ಹೊರಡಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.