ಹುಬ್ಬಳ್ಳಿ: ನಗರದ ಎಸ್ಎಸ್ಕೆ ಕಲಾ ಹಾಗೂ ವಾಣಿಜ್ಯ ಪಪೂ ಮತ್ತು ಪದವಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ. 11ರಂದು ಬೆಳಗ್ಗೆ 10 ಗಂಟೆಗೆ ದಾಜಿಬಾನಪೇಟ ಶ್ರೀಮತಿ ಸೀತಾಬಾಯಿ ಕುಬೇರಸಾ ಹಬೀಬ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹುಬ್ಬಳ್ಳಿ-ಧಾರವಾಡ ಶ್ರೀ ತುಳಜಾಭವಾನಿ ದೇವಸ್ಥಾನ ಕೇಂದ್ರ ಪಂಚ ಕಮಿಟಿ ಅಧ್ಯಕ್ಷ ಸತೀಶ ಮೆಹರವಾಡೆ ಉದ್ಘಾಟಿಸುವರು. ಶ್ರೀ ತುಳಜಾಭವಾನಿ ಶಿಕ್ಷಣ ಸಮಿತಿ ಅಧ್ಯಕ್ಷ ನೀಲಕಂಠಸಾ ಜಡಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಎಸ್ಎಸ್ಕೆ ಸಮಾಜದ ಅಧ್ಯಕ್ಷ ಶಶಿಕುಮಾರ ಮೆಹರವಾಡೆ, ಡಿಡಿಪಿಯು ಕೆ.ಪಿ. ಸುರೇಶ, ಎಫ್.ಕೆ. ಧಲಬಂಜನ, ಇತರರು ಪಾಲ್ಗೊಳ್ಳುವರು.