ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Published on

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (2022-23ನೇ ಸಾಲಿನ) ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಶಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸೆಪ್ಟೆಂಬರ್ 5ರ ಒಳಗೆ ಶಿಕ್ಷಕರ ಸದನ (ಗುರುಭವನ), ನಂದಿನಿ ಹಾಲಿನ ಡೇರಿ ಬಳಿ, ಸಿದ್ದಾರ್ಥ ಬಡಾವಣೆ. ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊ: 9880122527 ಸಂಪರ್ಕಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಹೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net