ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published on

ಯಳಂದೂರು: ತಾಲೂಕಿನ ವಾಲ್ಮೀಕಿ ಶಿಕ್ಷಕರ ಬಳಗದ ವತಿಯಿಂದ ನಾಯಕ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಎಸ್‌ಎಸ್‌ಎಲ್ಸಿಯಲ್ಲಿ ಶೇ.80 ಕ್ಕಿಂತ ಹೆಚ್ಚು ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಕ್ಕಿಂತಲೂ ಹೆಚ್ಟು ಅಂಕಗಳನ್ನು ಪರೀಕ್ಷೆ-1 ರಲ್ಲಿ ಪಡೆದಿರುವ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಜು.15ರೊಳಗೆ ತಮ್ಮ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಮೊಬೈಲ್ ಸಂಖ್ಯೆಯ ಮಾಹಿತಿಯನ್ನು ಯಳಂದೂರಿನ ಬಸ್‌ನಿಲ್ದಾಣದ ಬಳಿ ಇರುವ ಗೋಪಿ ಸ್ಟುಡಿಯೋಗೆ ತಲುಪಿಸಲು ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net