ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Sangmesh Mulge
Published on

ಬೀದರ್: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಅಧಿಕ ಅಂಕ ಗಳಿಸಿದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವ ವಿವರ, ಇತ್ತೀಚಿನ ಭಾವಚಿತ್ರ, ದೃಢೀಕರಿಸಿದ ಅಂಕಪಟ್ಟಿ ಹಾಗೂ ಜಾತಿ ಪ್ರಮಾಣ ಪತ್ರಗಳೊಂದಿಗೆ ಜೂನ್ 25 ರ ಒಳಗೆ ಮಹಾಸಭೆ ವೆಬ್‍ಸೈಟ್  https://morningwind.in/scholarship/index ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಗಮೇಶ ಮೂಲಗೆ ತಿಳಿಸಿದ್ದಾರೆ. ಜಿಲ್ಲೆಯ ವೀರಶೈವ ಲಿಂಗಾಯತ ಸಮುದಾಯದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net