

ಚಿಕ್ಕೋಡಿ: ಮಕ್ಕಳಲ್ಲಿನ ಪ್ರತಿಭೆ ಅನಾವರಣ ಗೊಳಿಸುವ ಸದುದ್ದೇಶದಿಂದ ಪ್ರತಿ ವರ್ಷ ಸತೀಶ ಶುಗರ್ಸ್ ಅವಾರ್ಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದು ಯಾವುದೇ ಪ್ರಚಾರಕ್ಕಾಗಿ ಅಲ್ಲ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಇಲ್ಲಿನ ಆರ್.ಡಿ.ಕಾಲೇಜು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸತೀಶ ಶುಗರ್ಸ್ ಅವಾರ್ಡ್ ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕಲೆಗೆ ಪ್ರೋತ್ಸಾಹ ಅಗತ್ಯವಾಗಿದೆ. ಪಠ್ಯದ ಜತೆಗೆ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಚಿಕ್ಕೋಡಿ ಉಪ ವಿಭಾಗದ ಮಕ್ಕಳು ನಿರಂತರ ಪ್ರಯತ್ನ ಹಾಗೂ ಪರಿಶ್ರಮದಿಂದ ಉತ್ತಮ ಸಾಧನೆ ಮಾಡಬೇಕು. ಸತೀಶ ಫೌಂಡೇಷನ್ ನಿಮ್ಮ ಜತೆಗಿರುತ್ತದೆ ಎಂದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ರಾಜೇಶ ಕದಮ, ಮುಕುಂದ ಭೋಜನವರ, ಯಮುನಾಬಾಯಿ ಕಲಾಚಂದ್ರ, ಸುದರ್ಶನ ಗೊರವ ಅವರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸಾಧಕ ರತ್ನ ಪ್ರಶಸ್ತಿ ವಿತರಿಸಿದರು.
ಕೆಪಿಸಿಸಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ ಜಾರಕಿಹೊಳಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಬುಡಾ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಮಾಜಿ ಶಾಸಕ ಶ್ಯಾಮ ಘಾಟಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ರಿಯಾಜ ಚೌಗಲೆ, ಶಿವು ಪಾಟೀಲ, ಪಂಕಜ ಪಾಟೀಲ, ಕಿರಣ ರಜಪೂತ, ಪಿ.ಐ.ಕೋರೆ, ಬಿಇಒ ಬಿ.ಎ.ಮೇಕನಮರಡಿ ಇತರರಿದ್ದರು. ರಾಮಕೃಷ್ಣ ಪಾನಗುಡೆ ನಿರೂಪಿಸಿದರು.