ಪ್ರತಿಭೆ ಗುರುತಿಸಿ, ಗೌರವಿಸುವ ಕೆಲಸವಾಗಲಿ

PRPURA PRATHIBHAA 15
Published on

ಪರಶುರಾಮಪುರ: ಸಾಧಕ ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕೆಲಸವಾಗಬೇಕಿದೆ ಎಂದು ತಾಪಂ ಮಾಜಿ ಸದಸ್ಯ ಇ.ಎನ್.ವೆಂಕಟೇಶ್ ಹೇಳಿದರು.
ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ 1978-79 ನೇ ಸಾಲಿನ ಎಸ್ಸೆಸ್ಸೆಲ್ಸಿ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು.
ಇದೇ ವೇಳೆ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಸಂಜನಾ ಎಚ್., ಚಂದನಾ ಆರ್ ವಿ., ಅಕ್ಷಯ್ ಎಂ ವಿದ್ಯಾರ್ಥಿಗಳಿಗೆ ಕ್ರಮವಾಗಿ ಐದು, ಮೂರು, ಎರಡು ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಎಸ್ ಪ್ರಾಚಾರ್ಯ ನಾಗರಾಜು, ಉಪ ಪ್ರಾಚಾರ್ಯ ತುಂಗಭದ್ರಪ್ಪ, ಗ್ರಾಮದ ಮುಖಂಡರಾದ ಜಯವೀರಾಚಾರಿ, ಹೊರಕೇರಿ ರಂಗಸ್ವಾಮಿ, ಹಳೇ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಾದ ವೆಂಕಟೇಶಣ್ಣ, ನರಸಿಂಹಮೂರ್ತಿ, ರಾಮಚಂದ್ರಪ್ಪ, ಪ್ರಕಾಶ, ತಿಮ್ಮಯ್ಯ, ರಾಜಣ್ಣ, ನಾಗರಾಜು ಶಿವಮೂರ್ತಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net