ಪ್ರತಿಭೆ ಗುರುತಿಸುವ ಕೆಲಸವಾಗಲಿ

02
Published on

ಬೆಳಗಾವಿ: ಪ್ರತಿಭಾನ್ವೇಷಣೆ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ವಿನೂತನ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಸುವರ್ಣ ವಿಧಾನ ಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ-2024 ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವ ಇಂತಹ ಕಾರ್ಯಕ್ರಮ ಪ್ರತಿ ವರ್ಷ ಆಯೋಜಿಸಬೇಕು. ಗ್ರಾಮೀಣ ಭಾಗದ ಬಡ ಮಕ್ಕಳ ಪ್ರತಿಭೆ ಗುರುತಿಸಿ ಪೋಷಿಸುವ ಕಾರ್ಯವಾಗಬೇಕು ಎಂದು ಸಲಹೆ ನೀಡಿದರು.

ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ ಆಯೋಜಿಸಿ, ಶಾಲಾ ಮಟ್ಟದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸುವುದು ಹಾಗೂ ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಸದುದ್ದೇಶದೊಂದಿಗೆ ಇಂತಹ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಿಳಿಸಿದರು.

ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕ ಚಂದ್ರ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ, ಡಿಡಿಪಿಐ ಲೀಲಾವತಿ ಹಿರೇಮಠ, ಶಿಕ್ಷಣ ಇಲಾಖೆ ಉಪನಿರ್ದೆಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net