ಪ್ರತಿಭೆಗಳ ಅನಾವರಣಕ್ಕೆ ವೇದಿಕೆ

14ss2chadmavwsa
Published on

ಶನಿವಾರಸಂತೆ : ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪಠ್ಯಚಟುವಟಿಕೆಗೆ ಸೀಮಿತವಾಗದೆ ಮಕ್ಕಳಲ್ಲಿ ಅಡಗಿರುವ ಸಾಂಸ್ಕೃತಿಕ ಮತ್ತು ನಾನಾ ಪ್ರತಿಭೆಗಳನ್ನು ಪ್ರದರ್ಶಿಸಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಕಳೆದ 21 ವರ್ಷಗಳಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಹಮ್ಮಿಕೊಂಡು ಬರುತ್ತಿದೆ ಎಂದು ಶನಿವಾರಸಂತೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಹೇಳಿದರು.
ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣ ಇಲಾಖೆ ಮತ್ತು ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಗರುವಾರ ಹಮ್ಮಿಕೊಂಡಿದ್ದ ಶನಿವಾರಸಂತೆ ಮತ್ತು ಹಂಡ್ಲಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಮಕ್ಕಳ 2023-24ನೇ ಸಾಲಿನ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಲ್ಲಿ ಪಠ್ಯಚಟುವಟಿಕೆಗೆ ಹೊರತಾದ ಬಹುಮುಖ ಪ್ರತಿಭೆಗಳಿರುತ್ತದೆ. ಇದನ್ನು ಗುರುತಿಸುವ ಸಲುವಾಗಿ 2001ರಲ್ಲಿ ಆಗಿನ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಈ ಮೂಲಕ ಪ್ರತಿವರ್ಷ ಹಮ್ಮಿಕೊಳ್ಳುತ್ತಿರುವ ಈ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಈ ವೇದಿಕೆ ಮೂಲಕ ಅನಾವರಣಗೊಳಿಸುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net