ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ

16 ckm 6
ಚಿಕ್ಕಮಗಳೂರು ತಾಲೂಕಿನ ಉz್ದÉÃಬೋರನಹಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮವನ್ನುz್ದÉÃಶಿಸಿ ಸರಪನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಎನ್.ವೇಣು ಮಾತನಾಡಿದರು. ಭಾನುಪ್ರಕಾಶ್, ಶಶಿಕಲಾ, ಜಗದೀಶ್, ದಿನೇಶ್, ಚಂದ್ರಯ್ಯ, ಶ್ರೀನಿವಾಸ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾಕಾರಂಜಿ ಸಹಕಾರಿಯಾಗಿದೆ ಎಂದು ಸರಪನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಎನ್.ವೇಣು ತಿಳಿಸಿದರು.

ತಾಲೂಕಿನ ಉz್ದೆÃಬೋರನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಲಸ್ಟರ್ ಮಟ್ಟದ ಶಾಲೆಗಳಲ್ಲಿ ಏರ್ಪಡಿಸುವ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಚಿಕ್ಕಂದಿನಿAದಲೇ ಭಾಗವಹಿಸಿ ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರಹಾಕಲು ಇದು ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು.

ಶಿಕ್ಷಣದಷ್ಟೇ ಮಹತ್ವವನ್ನು ಪ್ರತಿಭಾಕಾರಂಜಿಗಳಿಗೆ ನೀಡುವ ಮೂಲಕ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ನಾಂದಿಯಾಗಲಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ವಿವಿಧ ೧೨ ಕಿರಿಯ ಮತ್ತು ೬ ಹಿರಿಯ ಪ್ರಾಥಮಿಕ ಶಾಳೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬಿಳೇಕಲ್ಲಳ್ಳಿ ಗ್ರಾಪಂ ಅಧ್ಯಕ್ಷ ಭಾನುಪ್ರಕಾಶ್, ಲಕ್ಕುಮ್ಮನಹಳ್ಳಿ ಗ್ರಾಪಂ ಅಧ್ಯಕ್ಷೆ ಶಶಿಕಲಾ, ಲಕ್ಯಾ ಹೋಬಳಿ ಇಸಿಓ ಜಗದೀಶ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ದಿನೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net