

ನೆಲಮಂಗಲ: ಉತ್ತಮ ಸವಾಜ ನಿರ್ವಾಣಕ್ಕೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ವನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠದ ಶ್ರೀ ಡಾ.ಬಸವರವಾನಂದ ಸ್ವಾಮೀಜಿ ತಿಳಿಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂ ಹಾಗೂ ಗ್ರಾವಾಂತರ ಜಿಲ್ಲಾ ಕರುನಾಡ ವಿಜಯ ಸೇನೆ ಸಹಯೋಗದಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಕರಿಲ್ಲದೆ ಉತ್ತಮ ಸವಾಜವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಪ್ರತಿಯೊಬ್ಬರ ಏಳಿಗೆಯ ಹಿಂದೆ ಗುರುವಿನ ಕಪೆ ಇದ್ದೇ ಇರುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವಿವಿಧ ಶಾಲಾ ಶಿಕ್ಷಕರನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸುವ ಸಂಟನೆ ಕಾರ್ಯ ಶ್ಲಾಘನಾರ್ಹ ಎಂದರು.
ಕರುನಾಡ ವಿಜಯ ಸೇನೆ ಅಧ್ಯಕ್ಷ ಎಚ್.ಎನ್. ದೀಪಕ್ ವಾತನಾಡಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಆರಂಭಿಕ ಹಂತದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮುಖ್ಯಪಾತ್ರ ವಹಿಸುತ್ತಾರೆ. ಶಾಲಾ ಶಿಕ್ಷಕರಿಗೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕಿದೆ ಎಂದರು.
ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ 25ಕ್ಕೂ ಹೆಚ್ಚು ಶಿಕ್ಷಕರನ್ನು ಸನ್ಮಾನಿಸಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಯುವ ಟಕ ಅಧ್ಯಕ್ಷ ಆರ್.ಎಸ್. ಮಹೇಶ್, ಉಪಾಧ್ಯಕ್ಷ ಸಚ್ಚಿದಾನಂದ, ಸಾವಾಜಿಕ ಜಾಲತಾಣದ ಅಧ್ಯಕ್ಷ ರೇಣುಕಾಪ್ರಸಾದ್, ಗ್ರಾವಾಂತರ ಜಿಲ್ಲಾಧ್ಯಕ್ಷ, ಕಾರ್ಮಿಕ ಟಕದ ಪ್ರದೀಪ್, ಸರ್ಕಾರಿ ನೌಕರರ ಸಂದ ಜಿಲ್ಲಾ ಉಪಾಧ್ಯಕ್ಷ ಕೆ. ಎನ್. ನಾಗೇಶ್, ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ರಾಜ್ಯಸಂಚಾಲಕ ಆರ್. ನಾರಾಯಣಸ್ವಾಮಿ, ಚಿಂತಾಮಣಿ ತಾಲೂಕು ಟಕದ ಅಧ್ಯಕ್ಷ ಎಂ..ಆರ್. ಮಲ್ಲಿಕಾರ್ಜುನಯ್ಯ ಮತ್ತಿತರರು ಇದ್ದರು.