ಪ್ರತಿಯೊಂದು ಮಗುವಿಗೂ ಶಿಕ್ಷಣ ಅವಶ್ಯಕ

22gkl1
Published on

ಗುರುಮಠಕಲ್: ಶೈಕ್ಷಣಿಕ ವರ್ಷ ಆರಂಭವಾಗಿರುವುದರಿAದ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಬೇಕು. ಅಲ್ಲದೆ ಯಾವ ಮಕ್ಕಳು ಕೂಡ ಶಾಲೆಯಿಂದ ಹೊರಗೆ ಉಳಿಯಬಾರದು. ಕಡ್ಡಾಯ ಶಿಕ್ಷಣ ಜಾರಿಯಲ್ಲಿರುವುದರಿಂದ ಪ್ರತಿ ಮಗುವಿಗೂ ಶಿಕ್ಷಣ ಅವಶ್ಯಕವಾಗಿದೆ ಎಂದು ಮುಖ್ಯಗುರು ಮೋಹನ್ ಕುಮಾರ ಹೇಳಿದರು.

ತಾಲೂಕಿನ ಕೊಂಕಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಕಲಿಕಾ ಟಾಟಾ ಟ್ರಸ್ಟ್ ಆಶ್ರಯದಲ್ಲಿ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರ ಶಿಕ್ಷಣದ ಪ್ರಗತಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದೆ. ಮಧ್ಯಾಹ್ನದ ಬಿಸಿಯೂಟ, ಸಮವಸ್ತç, ಪಠ್ಯಪುಸ್ತಕ ಸೇರಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಅವಕಾಶ ಪ್ರತಿಯೊಂದು ಮಗುವಿಗೂ ಲಭಿಸಬೇಕು. ಈ ಹಿನ್ನೆಲೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲು ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಸ್ವಪ್ನ, ಉಪಾಧ್ಯಕ್ಷ ನಿಂಗಪ್ಪ ಹಾಗೂ ಕಲಿಕಾ ಟಾಟಾ ಟ್ರಸ್ಟ್ ಸಂಯೋಜಕ ಮಲ್ಲಿಕಾರ್ಜುನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net