ಪ್ರತಿಯೊಬ್ಬರ ಆರೋಗ್ಯ ಮಾಹಿತಿ ಸಂಗ್ರಹಿಸಿ

2cmy5
Published on

ಚಿಕ್ಕಬಳ್ಳಾಪುರ: ಪ್ರತಿ ಮನೆಗೂ ಭೇಟಿ ನೀಡಿ, ಕುಟುಂಬದ ಸದಸ್ಯರ ಆರೋಗ್ಯ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಕಣಜೇನಹಳ್ಳಿ, ಚಿಂತಾಮಣಿಯ ಎನ್.ಆರ್.ಬಡಾವಣೆ, ಕೋನಪಲ್ಲಿ ಸೇರಿ ವಿವಿಧೆಡೆ ಭಾನುವಾರ ಭೇಟಿ ನೀಡಿದ ಅವರು, ಅಧಿಕಾರಿಗಳು ಮತ್ತು ಜನರೊಂದಿಗೆ ಚರ್ಚಿಸಿದರು.

ಆಯಾ ವ್ಯಾಪ್ತಿಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸ್ವಯಂಸೇವಕರು ಮನೆ ಮನೆಗೆ ಭೇಟಿ ನೀಡಿ, ಜನರ ಆರೋಗ್ಯ ಮಾಹಿತಿ ಸಂಗ್ರಹಿಸಬೇಕು. ಕಾಲ ಕಾಲಕ್ಕೆ ವರದಿ ನೀಡಬೇಕೆಂದು ತಾಕೀತು ಮಾಡಿದರು.

ನಗರಗಳಿಗೆ ಸೀಮಿತವಾಗಿದ್ದ ಪ್ರಕರಣಗಳು ಈಗ ಹಳ್ಳಿಗಳಲ್ಲೂ ಹೆಚ್ಚು ಪತ್ತೆಯಾಗುತ್ತಿವೆ. ಆದ್ದರಿಂದ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರಬೇಕು. ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.

ಮುಂಜಾಗ್ರತಾ ಕ್ರಮಗಳನ್ನು ಚಾಚೂ ತಪ್ಪದೇ ಪಾಲಿಸುವುದೇ ಸೋಂಕು ತಡೆಯುವ ಪ್ರಮುಖ ಮಾರ್ಗ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು. ಕರೊನಾ ನೋಡಲ್ ಅಧಿಕಾರಿ ಎನ್.ಭಾಸ್ಕರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net