ಪ್ರತಿಯೊಬ್ಬರ ಜೀವನದಲ್ಲಿ ವೈದ್ಯರ ಪಾತ್ರ ಬಹುಮುಖ್ಯ:ಜಿ.ಎಸ್. ದ್ರಾಕ್ಷಾಯಿಣಿ

ಪ್ರತಿಯೊಬ್ಬರ ಜೀವನದಲ್ಲಿ ವೈದ್ಯರ ಪಾತ್ರ ಬಹುಮುಖ್ಯ:ಜಿ.ಎಸ್. ದ್ರಾಕ್ಷಾಯಿಣಿ
Published on

ಹಾಸನ: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತನಾಗಿ ಜೀವನ ನಡೆಸಲು ವೈದ್ಯರ ಪಾತ್ರ ಬಹುಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಜಿ.ಎಸ್. ದ್ರಾಕ್ಷಾಯಿಣಿ ತಿಳಿಸಿದರು.
ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಘಟಕ, ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ರೋಟರಿ ಮಿಡ್ ಟೌನ್ ಇವರ ಸಂಯುಕ್ತ ಆಶಯದಲ್ಲಿ ರೆಡ್ ಕ್ರಾಸ್ ಭವನದಲ್ಲಿ ಅಂತಾರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯರು ದೇವರು, ಅವರನ್ನ ಗೌರವಿಸುವ ಕೆಲಸ ಪ್ರತಿಯೊಬ್ಬರಿಂದಲೂ ಕೂಡ ಆಗಬೇಕು ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಜೀವನದ ಶೈಲಿ ಬದಲಾಗುತ್ತಿದೆ. ಇದರಿಂದ ಸಾಕಷ್ಟು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳುವ ಮೂಲಕ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸವನ್ನ ಸಂಘ-ಸಂಸ್ಥೆಗಳು ಮಾಡುತ್ತಿವುದು ನಿಜಕ್ಕೂ ಸಂತೋಷ ತಂದಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಗರ್ಭ ಕೊರಳಿನ ಕ್ಯಾನ್ಸರ್‌ದಿಂದ ಸಾಕಷ್ಟು ಮಹಿಳೆಯರು ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಅವರಿಗೆ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.
ಈ ರೋಗವನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಮಾಡಿ ಅದಕ್ಕೆ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾಗಿದೆ. ಸಂಘ-ಸಂಸ್ಥೆಗಳು ಈ ನಿಟ್ಟಿನಲ್ಲಿ ನೆರವಾಗಬೇಕು .ಈ ಕಾರ್ಯಕ್ರಮದ ಸದುಪಯೋಗವನ್ನ ಮಹಿಳೆಯರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಚ್.ಪಿ. ಮೋಹನ್ ಮಾತನಾಡಿ, ಅಂತಾರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ನಮ್ಮ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅಲ್ಲದೆ ವೈದ್ಯರನ್ನ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.
ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷೆ ಡಾ. ಎ.ಸಾವಿತ್ರಿ ಮಾತನಾಡಿ, ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸದೆ, ನಿರ್ಲಕ್ಷ ವಹಿಸುವ ಮೂಲಕ ನಾನಾ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಅಲ್ಲದೆ, ಸಮಾಜದಲ್ಲಿ ಕೂಡ ಮಹಿಳೆಯರ ಆರೋಗ್ಯದ ಬಗ್ಗೆ ಕಡೆಗಣಿಸಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಒಂದು ಮಹಿಳೆ ಜನನದಿಂದ ವೃದ್ದೆಯವರೆಗೂ ಹಲವು ಬದಲಾವಣೆಗಳನ್ನ ಅನುಭವಿಸುತ್ತಾಳೆ. ಅಲ್ಲದೆ ಈ ಸಂದರ್ಭದಲ್ಲಿ ದೈಹಿಕವಾಗಿ ಮತ್ತು ಶಾರೀರಿಕವಾಗಿ ಸಾಕಷ್ಟು ಬದಲಾವಣೆಗಳು ಆಗುತ್ತದೆ. ಆದರೆ, ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸದೆ, ಕೇವಲ ಕೆಲಸ ಕಾರ್ಯದಲ್ಲಿ ತಮ್ಮನ್ನ ತಾವು ತೂಡಗಿಸಿಕೊಳ್ಳುತ್ತಾರೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ. ಜನಾರ್ಧನ್ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ಬಿ ಸಂಧ್ಯಾ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಶು ಯೋಜನಾಧಿಕಾರಿ ಜ್ಯೋತಿಲಕ್ಷ್ಮಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಉಪ ಸಭಾಪತಿ ಡಾ. ವೀರಭದ್ರಪ್ಪ, ಮತ್ತು ಪ್ರಸೂತಿ ತಜ್ಞರ ಸಂಘದ ಅಧ್ಯಕ್ಷೆ ಬಿ.ಎಸ್. ಗಿರಿಜಾ, ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ.ದಿನೇಶ್, ಸ್ತ್ರೀರೋಗ ತಜ್ಷೆ ಡಾ. ರಂಗಲಕ್ಷ್ಮಿ, ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಡಾ.ಅಬ್ದುಲ್ ಬಶೀರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವೇಣು ಕುಮಾರ್, ಡಾ.ಭಾರತಿ ರಾಜಶೇಖರ್, ಪತ್ರಕರ್ತ ಬಿ.ಆರ್. ಉದಯಕುಮಾರ್ ಸೇರಿದಂತೆ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net