ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ

15. HBH. 1
Published on

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೋಮವಾರ ನಡೆಯಿತು. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಶಾಸಕ ಕೆ.ನೇಮಿರಾಜ್ ನಾಯ್ಕ ಚಾಲನೆ ನೀಡಿದರು.

ಭಾರತದ ಸಂವಿಧಾನಕ್ಕೆ ಪ್ರಪಂಚದಲ್ಲಿ ಮನ್ನಣೆ ದೊರೆತಿದೆ. ಅತಿದೊಡ್ಡ ಸಂವಿಧಾನ ನಮ್ಮದಾಗಿದ್ದು, ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಾಗಿದೆ ಎಂದು ಶಾಸಕ ನೇಮಿರಾಜ್ ನಾಯ್ಕ ತಿಳಿಸಿದರು.

ರಾಮನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಳಿಕ ಕೂಡ್ಲಿಗಿ ವೃತ್ತದವರೆಗೆ ಸೈಕಲ್ ಜಾಥಾ ನಡೆಯಿತು.

ತಹಸೀಲ್ದಾರ್ ಆರ್.ಕವಿತಾ, ತಾ.ಪಂ. ಇಒ ಬಿ.ಲಕ್ಷ್ಮೀಕಾಂತ್, ಬಿಇಒ ಮೈಲೇಶ್ ಬೇವೂರು, ಪುರಸಭೆ ಸದಸ್ಯರಾದ ಬಿ.ಗಂಗಣ್ಣ, ನಾಗರಾಜ ಜನ್ನು, ದೀಪಕ್ ಸಾ ಕಠಾರೆ, ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಪ್ರಮುಖರಾದ ಕನ್ನಿಹಳ್ಳಿ ಚಂದ್ರಶೇಖರ, ಚಿತ್ತವಾಡಗಿ ಪ್ರಕಾಶ, ಕಿನ್ನಾಳ ಸುಭಾಷ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೀಶ, ಮ್ಯಾನೇಜರ್ ಶೋಭಾ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಅಕ್ಷರ ದಾಸೋಹ ಅಧಿಕಾರಿ ರಾಜಕುಮಾರ್ ನಾಯ್ಕ, ಪಾಂಡುರಂಗ ನಾಯ್ಕ, ಬ್ಯಾಟಿ ನಾಗರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net