ಪ್ರತಿಯೊಬ್ಬರು ಪರಿಸರ ಕಾಳಜಿ ವಹಿಸಲಿ

20-pnp 1
Published on

ಪಾಂಡವಪುರ: ತಾಲೂಕಿನ ಸರ್ಕಾರಿ ಶಾಲೆಗಳಿಗೆ ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಅಳವಡಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಟಿಸಿದರು.


ಉತ್ತಮ ಆರೋಗ್ಯಕ್ಕಾಗಿ ಶುದ್ಧ ಗಾಳಿ, ನೀರಿನ ಜತೆಗೆ ನಮ್ಮ ಸುತ್ತಮುತ್ತಲಿನ ಪರಿಸರ ಚೆನ್ನಾಗಿರಬೇಕು. ಇತ್ತೀಚೆಗೆ ಕಲುಷಿತಗೊಳ್ಳುತ್ತಿರುವ ವಾತಾವರಣ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬರು ಪರಿಸರ ಬಗ್ಗೆ ಕಾಳಜಿ ವಹಿಸಬೇಕು ಎಂದು ಅವರು ಸಲಹೆ ನೀಡಿದರು.


ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಈರೇಗೌಡನಕೊಪ್ಪಲು, ನಲ್ಲಹಳ್ಳಿ, ಮಾಡರಹಳ್ಳಿ ಹಾಗೂ ಮೇನಾಗರ ಗ್ರಾಮಗಳ ಶಾಲೆಗಳಲ್ಲಿ ಫಿನ್‌ಕೇರ್ ಸಂಸ್ಥೆ ಸಿಎಸ್‌ಆರ್ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ನೀರಿನ ಘಟಕಗಳನ್ನು ಸ್ಥಾಪಿಸಿಸಲಾಗಿದೆ ಎಂದು ಸಂಸ್ಥೆಯ ದಕ್ಷಿಣ ವಿಭಾಗದ ಮುಖ್ಯಸ್ಥ ಜಿಮ್ಮಿ ಹೇಳಿದರು.


ರೈತಸಂಘದ ತಾಲೂಕು ಅಧ್ಯಕ್ಷ ನಾಗರಾಜು, ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ವಿಜಯಕುಮಾರ್, ಬ್ಯಾಂಕಿನ ಅಧಿಕಾರಿಗಳಾದ ಶಂಕರ್, ಪರಮೇಶ್, ಮಧು, ಮಹದೇವ, ಸಿದ್ದರಾಜು, ಭಾರ್ಗವ್, ಗ್ರಾಪಂ ಸದಸ್ಯರಾದ ಸರೋಜಮ್ಮ, ಕುಮಾರ, ಶಿಕ್ಷಕರಾದ ಎಲ್.ಕೆ.ಅನಂತಮೂರ್ತಿ, ವಿ.ಎಸ್.ವಿನೋದಕುಮಾರ್, ಸದಾನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net