ಪ್ರತಿಯೊಬ್ಬರೂ ಅಂಬೇಡ್ಕರ್ ಆದರ್ಶ ಪಾಲಿಸಿ

6 ckm 7
ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು. ಡಾ.ಕೆ.ಪಿ.ಅಂಶುಮAತ್, ಎಚ್.ಪಿ.ಮಂಜೇಗೌಡ, ನಯಾಜ್ ಅಹಮದ್, ಮಲ್ಲೇಶಸ್ವಾಮಿ, ಹಿರೇಮಗಳೂರು ರಾಮಚಂದ್ರ, ತನೋಜ್ ಕುಮಾರ್ ನಾಯ್ಡು, ಕುಸುಮಾ ಭರತ್, ನೇತ್ರಾವತಿ, ಮುನೀರ್, ಶಾದಬ್ ಆಲಂ ಖಾನ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಪ್ರತಿಯೊಬ್ಬರೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ, ಆದರ್ಶ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಭದ್ರಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ತಿಳಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ದೇಶಕ್ಕೆ ಎಲ್ಲರೂ ಒಪ್ಪುವಂಥ ಶ್ರೇಷ್ಠವಾದ ಸರ್ವ ಧರ್ಮಗಳಿಗೆ ಅನ್ವಯವಾಗುವಂತಹ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟಿದ್ದಾರೆ. ಸಂವಿಧಾನವನ್ನು ದ್ವೇಷಿಸುವವರೂ ಇಂದು ಅವರನ್ನು ಆರಾಧಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮಾತ್ರ ಸಂವಿಧಾನದ ಅಡಿಯಲ್ಲಿ ರಾಜಕಾರಣ ಮಾಡುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಸಾಮಾನ್ಯ ಜನರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ದಲಿತರು ಸಮನಾಗಿ ಅಧಿಕಾರವನ್ನು ಹಿಡಿಯಲು ಸಂವಿಧಾನ ಕಾರಣವಾಗಿದೆ. ಅವರ ತ್ಯಾಗ ಬಲಿದಾನದಿಂದ ಇಂದು ನಾವುಗಳು ಸ್ವತಂತ್ರವಾಗಿ ಸಮಾಜದಲ್ಲಿ ಬಹುಕಲು ಸಹಕಾರಿಯಾಗಿದೆ. ನಮ್ಮ ದೇಶದ ಸಂವಿಧಾನವನ್ನು ಇತರೆ ದೇಶಗಳು ಪಾಲನೆ ಮಾಡುವುದನ್ನು ಕಾಣುತ್ತಿz್ದೆÃವೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ದೇಶದ ಇಂದಿನ ಪರಿಸ್ಥಿತಿಯಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಕಲ ಅಧಿಕಾರವನ್ನು ಕೊಟ್ಟಿದ್ದಾರೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ನಯಾಜ್ ಮಾತನಾಡಿ, ದೇಶದಲ್ಲಿರುವ ಕಾನೂನು ಎಲ್ಲರಿಗೂ ಒಂದೇ. ಅಂಬೇಡ್ಕರ್ ಬರೆದಿರುವ ಸಂವಿಧಾನಕ್ಕೆ ಎಲ್ಲರೂ ತಲೆಬಾಗಿಸಬೇಕು. ಅಂಬೇಡ್ಕರ್ ತಮ್ಮ ಜೀವಿತ ಅವಧಿಯಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರ ಫಲವಾಗಿ ಇಂದು ಜನಸಾಮಾನ್ಯರು ಅಧಿಕಾರ ನಡೆಸಲು ಸಹಕಾರಿಯಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಮಲ್ಲೇಶಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬAತೆ ನವ ಭಾರತ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಸ್ತಿçà ಸಮಾನತೆ, ಮೀಸಲಾತಿ, ಜನಸಾಮಾನ್ಯರು ಪ್ರತಿಯೊಬ್ಬರೂ ಪ್ರಜಾಪ್ರಭುತ್ವದಲ್ಲಿ ಮತ ಚಲಾಯಿಸಬೇಕು ಎಂಬುದು ಅವರ ದೊಡ್ಡ ಕನಸಾಗಿತ್ತು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್ ನಾಯ್ಡು, ಕೆಪಿಸಿಸಿ ಎಸ್.ಸಿ ಘಟಕ ರಾಜ್ಯ ಸಂಚಾಲಕಿ ನೇತ್ರಾವತಿ, ಮಹಿಳಾ ಕಾಂಗ್ರೆಸ್ ಸದಸ್ಯೆ ಕುಸುಮಾ ಭರತ್, ಕಾಂಗ್ರೆಸ್ ಮುಖಂಡರಾದ ಎಚ್.ಎಸ್.ಜಗದೀಶ್, ಡಿ.ಸುರೇಶ್, ನಗರಸಭೆ ಸದಸ್ಯರಾದ ಮುನೀರ್, ಶಾದಬ್ ಆಲಂ ಖಾನ್, ಖಲಂದರ್, ಕೀರ್ತಿ ಶೇಟ್, ನಗರ ಆಶ್ರಯ ಸಮಿತಿ ಸದಸ್ಯ ಪ್ರಸಾದ್ ಅಮಿನ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net