ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಹೊಂದಿ

1MDG3 MLA CHALANE
Published on

ಮುಂಡರಗಿ: ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಪಟ್ಟಣದ ಕೋಟೆ ಭಾಗದಲ್ಲಿ ಶಾಸಕ ರಾಮಣ್ಣ ಲಮಾಣಿ ಅವರು ಮಂಗಳವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕರು, ಕರೊನಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು. ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ವೈದ್ಯರಿಂದ ತಪಾಸಣೆ ಮಾಡಿಸಿಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದರು.

ಹಿರೇವಡ್ಡಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಗಿರೀಶ ಬಡಿಗೇರ ಮಾತನಾಡಿ, ‘ವೈದ್ಯರ ನಡಿಗೆ ಹಳ್ಳಿಯ ಕಡೆಗೆ’ ಕಾರ್ಯಕ್ರಮದಲ್ಲಿ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮಗಳ ಮನೆಮನೆಗೆ ತೆರಳಿ ಜನರಲ್ಲಿ ಕರೊನಾ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಕರೊನಾ ಲಕ್ಷಣ ಕಂಡುಬಂದರೆ ತಪಾಸಣೆ ಮಾಡಿ. ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು ಎಂದರು. ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಬಿಜೆಪಿ ಮುಂಡರಗಿ ಮಂಡಲ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಕರಬಸಪ್ಪ ಹಂಚಿನಾಳ, ಎಸ್.ವಿ. ಪಾಟೀಲ, ಅಂದಪ್ಪ ಉಳ್ಳಾಗಡ್ಡಿ, ಎಸ್.ಎಲ್. ಕೋರಿ, ಹರ್ಷವರ್ಧನ ದೊಡ್ಡಮನಿ, ಎಸ್.ಎಸ್. ಹುಲಗೇರಿ, ಮಂಜುನಾಥ ಮುಧೋಳ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net