

ಯಾದಗಿರಿ: ಪರಿಸರ ಸಂರP್ಷÀಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ ಮುಂದೆ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಿದರೆ ಮುಂದೆ ಅವು ನಮಗೆ ನೆರಳು ನೀಡುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಂಜುನಾಥ ಹೇಳಿದರು.
ಇಲ್ಲಿನ ಮೈಲಾಪುರ ಅಗಸಿ ಸಮೀಪದ ಕೋಳಿವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಮಾತನಾಡಿದರು.
ಕಳೆದ ನಾಲ್ಕು ದಶಕಗಳಿಂದ ಈ ಸಂಸ್ಥೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆಯೇ ಹತ್ತು-ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗಗಳಲ್ಲಿ ಜನರ ಬದುಕನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಲಾಗುತ್ತಿದೆ, ಮಹಿಳಾ ಸಬಲಿಕರಣಕ್ಕೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿ¯್ಲÁ ಜನಜಾಗೃತಿ ವೇದಿಕೆ ಸದಸ್ಯ ನಾಗರಾಜ ಬಿರನೂರ ಮಾತನಾಡಿ, ಮನೆಗೊಂದು-ಮಗು ಮಗುವಿಗೊಂದು-ಮರ ಎನ್ನುವ ವಾಸ್ತವದ ವಿಷಯವಾಗಿ ಪರಿಸರ ಕಾಪಾಡುವಲ್ಲಿ ಮಕ್ಕಳ ಪಾತ್ರ ಬಹು ಮುಖ್ಯವಾಗಿದೆ. ಸದೃಢ ಸಮಾಜ ಕಟ್ಟಲು ಮಕ್ಕಳು ಸದಾ ಪರಿಸರದ ಜಾಗೃತಿಯ ಕುರಿತು ಕಾರ್ಯ ಪ್ರವೃತ್ತರಾಗಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯP್ಷÀತೆ ವಹಿಸಿ ಮಾತನಾಡಿದ ಮುಖ್ಯ ಗುರು ಮರೆಪ್ಪ ಮ್ಯಾಗೇರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಕಾರ್ಯಗಳಿಂದ ಗ್ರಾಮೀಣ ಪ್ರದೇಶದಲ್ಲಿ ಶಿP್ಷÀಣ, ಆರೋಗ್ಯ, ಸಬಲೀಕರಣ ಹಾಗೂ ವಿವಿಧ ಕ್ಷೇತ್ರದಲ್ಲಿ ಉತ್ತಮ ಕೆಲಸವಾಗಿದೆ ಎಂದರು.
ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಅರಿವು ಕುರಿತು ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳ ವಿತರಿಸಲಾಯಿತು. ಶಿP್ಷÀಕಿ ಶೈಲಾ ಜ್ಯೋತಿ ನಿರೂಪಿಸಿದರು, ವಲಯದ ಮೇಲ್ವಿಚಾರಕಿ ಕಮಲಾ ಸ್ವಾಗತಿಸಿದರು, ಕೃಷಿ ಮೇಲ್ವಿಚಾರಕ ಶರಣು ವಂದಿಸಿದರು.