ಪ್ರತ್ಯೇಕ ಧರ್ಮ ಹೋರಾಟ ನಿಂತಿಲ್ಲ

bkt-27-1
ಬಾಗಲಕೋಟೆ ನಗರದ ಪ್ರೇಸ್‌ಕ್ಲಬ್‌ನಲ್ಲಿ ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೂಡಲಸಂಗಮದ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ಹಾಗೂ ಗುರುಬಸಪ್ಪ ನಿಲುಗಲ್ಲ ಇದ್ದರು.
Published on

ಬಾಗಲಕೋಟೆ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರವಾಗಿ ನಡೆಯುತ್ತಲಿದೆ. ಯಾವತ್ತೂ ನಿಲ್ಲುವುದಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮಾಡುತ್ತೇವೆ ಎಂದು ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.

ನಗರದ ಪ್ರೇಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೈದ್ರಾಬಾದದಲ್ಲಿ ದೊಡ್ಡ ಮಟ್ಟದ ರ‍್ಯಾಲಿಯನ್ನು ನಡೆಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಲಿದ್ದರು. ಹೋರಾಟ ಮುಂದುವರೆಯಲಿದೆ. ಬಸವ ಕಲ್ಯಾಣದಲ್ಲಿ ಅ.೨೮ ರಿಂದ ೩೦ರವರೆಗೆ ನಡೆಯುವ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಚರ್ಚೆ ಮಾಡಲಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net