ಪ್ರತ್ಯೇಕ ಪ್ರಕರಣದಲ್ಲಿ ಸಾಕುಪ್ರಾಣಿಗಳ ಮೇಲೆ ಹುಲಿ, ಚಿರತೆ ದಾಳಿ

28-OCT-GPT-5
Published on

ಗುಂಡ್ಲುಪೇಟೆ: ಬಂಡೀಪುರ ಕಾಡಂಚಿನ ಗ್ರಾಮಗಳಲ್ಲಿ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟಲು ದೊಡ್ಡಮಟ್ಟದ ಸಭೆಗಳನ್ನು ನಡೆಸುತ್ತಿರುವ ಸಂದರ್ಭದಲ್ಲಿಯೇ ತಾಲೂಕಿನ ನಾನಾ ಗ್ರಾಮಗಳಲ್ಲಿ ವನ್ಯಜೀವಿಗಳ ದಾಳಿ ಪ್ರಕರಣಗಳು ವರದಿಯಾಗಿವೆ.

ಮಂಗಳವಾರ ಬೆಳಗ್ಗೆ ಚಿರತೆ ದಾಳಿ ನಡೆಸಿದ ಪರಿಣಾಮ ತಾಲೂಕಿನ ಚಿರಕನಹಳ್ಳಿ ಗ್ರಾಮದ ಗುರುಸ್ವಾಮಿ ಅವರ ಜಮೀನಿನಲ್ಲಿ ಮೇಯುತ್ತಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಸ್ಥಳಕ್ಕೆ ಕುಂದಕೆರೆ ವಲಯದ ಅರಣ್ಯಾಕಾರಿಗಳು ಭೇಟಿ ನೀಡಿ ಮಹಜರು ನಡೆಸಿದ್ದಾರೆ.

ಮಧ್ಯಾಹ್ನ ಭೀಮನಬೀಡು ಗ್ರಾಮದ ಕೆ.ಬಿ.ಶಿವಣ್ಣ ತಮ್ಮ ಮೇಕೆಗಳನ್ನು ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿ ಒಂದು ಮೇಕೆಯನ್ನು ಕೊಂದುಹಾಕಿದೆ. ಕುರಿಗಾಹಿಗಳ ಕೂಗಾಟದಿಂದ ವಿಚಲಿತಗೊಂಡ ಹುಲಿ ಸಮೀಪದ ಪೊದೆಗಳತ್ತ ಓಡಿಹೋಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಬರ್ ವಲಯದ ಪ್ರಭಾರ ವಲಯಾರಣ್ಯಾಕಾರಿ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಕೂಡಲೇ ಪರಿಹಾರ ಕೊಡುವ ಭರವಸೆ ನೀಡಿದರು.

ತಾಲೂಕಿನ ಪಡಗೂರು ಸಮೀಪ ಜಾನುವಾರುಗಳನ್ನು ಕೊಲ್ಲುತ್ತಿರುವ ಹುಲಿ ಪತ್ತೆಗೆ ಅರಣ್ಯ ಇಲಾಖೆ ಮಂಗಳವಾರವೂ ಅರಣ್ಯ ಇಲಾಖೆ ಸಾಕಾನೆ ಪಾರ್ಥಸಾರಥಿ ನೆರವಿನಿಂದ ಕೂಂಬಿಂಗ್ ನಡೆಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net