ಪ್ರಥಮ ಪಿಯುಸಿ ಪ್ರವೇಶ, ವಿದ್ಯಾರ್ಥಿ ವೇತನ ಪರೀಕ್ಷೆ

pngtree-college-entrance-exam-png-image_3865201
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಶ್ರೀಮತಿ ವಿದ್ಯಾ ಪಿ. ಹಂಚಿನಮನಿ ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಜ. 5ರಂದು ಬೆಳಗ್ಗೆ 10 ಗಂಟೆಗೆ ಶೈಕ್ಷಣಿಕ ಉತ್ಕೃಷ್ಟತೆ ಗುರುತಿಸುವ ಹಾಗೂ ಬೆಂಬಲಿಸುವ ಸಲುವಾಗಿ ಪಿಯು ವಿಜ್ಞಾನ ವಿಭಾಗಕ್ಕೆ ಪ್ರವೇಶ ಪರೀಕ್ಷೆ ಹಾಗೂ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ. ಸ್ಟೇಟ್ ಬೋರ್ಡ್ (ಕನ್ನಡ ಹಾಗೂ ಆಂಗ್ಲ ಮಾಧ್ಯಮ), ಸಿಬಿಎಸ್‌ಇ ಹಾಗೂ ಐಸಿಎಸ್‌ಇ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. ನಡೆಯಲಿದೆ. ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರ ವಿಷಯಗಳಿಗೆ ಸಂಬ೦ಧಿಸಿ ಎಸ್‌ಎಸ್‌ಎಲ್‌ಸಿ ಪಠ್ಯಕ್ರಮಕ್ಕೆ ಅನುಗುಣವಾಗಿ ಪರೀಕ್ಷೆ ಆಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net